ಕಾಂಗ್ರೆಸ್ ಕಾರ್ಯಕರ್ತರ ಕೊಲೆಗೆ ಬಳಸಿದ್ದ ಬೈಕ್, ಬೇಕಲ ಪೊಲೀಸ್ ಠಾಣೆಯಿಂದ ಕಾಣೆ

7:30 PM, Tuesday, August 10th, 2021
Share
1 Star2 Stars3 Stars4 Stars5 Stars
(No Ratings Yet)
Loading...

congress-workersಕಾಸರಗೋಡು : ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಮತ್ತು ಶರತ್ ಲಾಲ್ ಕೊಲೆ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದ ಬೈಕ್ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದೆ.

ಎಂಟನೇ ಆರೋಪಿ ಪನಯಾಲ್‌‌ನ ಸುಬೀಶ್ (29) ಕೃತ್ಯ ನಡಿಸಿದ ದಿನ ಸಂಚರಿಸಿದ್ದ ಬೈಕ್ ಬೇಕಲ ಪೊಲೀಸ್ ಠಾಣೆಯಿಂದ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾರಕಾಸ್ತ್ರ, ವಾಹನ ಮೊದಲಾದವುಗಳ ಫಾರೆನ್ಸಿಕ್ ತಪಾಸಣೆಯನ್ನು ಸಿಬಿಐ ನಡೆಸುತ್ತಿದ್ದಂತೆ ಇದೀಗ ಪೊಲೀಸ್ ಠಾಣೆಯಿಂದ ಬೈಕ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

2019ರ ಫೆಬ್ರವರಿ 17 ರಂದು ರಾತ್ರಿ ಪೆರಿಯ ಕಲ್ಯೊಟ್‌‌ನಲ್ಲಿ ಬೈಕ್‌‌ನಲ್ಲಿ ತೆರಳುತ್ತಿದ್ದ ಕೃಪೇಶ್ ಮತ್ತು ಶರತ್ ಲಾಲ್ ಅವರನ್ನು ಜೀಪ್‌‌‌‌ನಲ್ಲಿ ಬಂದು ಬೈಕ್‌‌ಗೆ ಢಿಕ್ಕಿ ಹೊಡೆಸಿ ಬಳಿಕ ಕೊಚ್ಚಿ ಕೊಲೆಗೈಯ್ಯಲಾಗಿತ್ತು. ಸುಪ್ರೀಂ ಕೋರ್ಟ್‌‌ನ ಆದೇಶದಂತೆ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.

ಪೊಲೀಸರು ಇಂಟರ್ ಫೋಲ್‌‌ನ ನೆರವಿನಿಂದ  ಆರೋಪಿ ಸುಬೀಶ್ ನನ್ನು ಗಲ್ಫ್‌‌  ನಿಂದ ವಶಕ್ಕೆ ಪಡೆಯಲಾಗಿತ್ತು. 2019ರ ಮೇ 16ರಂದು ಮಂಗಳೂರು ವಿಮಾನ ನಿಲ್ದಾಣದಿಂದ ಕ್ರೈಂ ಬ್ರಾಂಚ್ ಪೊಲೀಸರು ಈತನನ್ನು ಬಂಧಿಸಿದ್ದರು . ಬಳಿಕ ವಶಕ್ಕೆ ತೆಗೆದುಕೊಂಡಿದ್ದ ಬೈಕ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಬೇಕಲ ಪೊಲೀಸ್ ಠಾಣೆಗೆ ಒಪ್ಪಿಸಲಾಗಿತ್ತು. ಸಿಬಿಐ ತನಿಖಾಧಿಕಾರಿಗಳು ವಶಪಡಿಸಿಕೊಂಡಿದ್ದ 12 ವಾಹನಗಳನ್ನು, ಮಾರಕಾಸ್ತ್ರ ಹಾಗೂ ಇತರ ಸಾಕ್ಷ್ಯಧಾರಗಳನ್ನು ವಶಕ್ಕೆ ಪಡೆಯಲು ಬಂದಾಗ ಒಂದು ಬೈಕ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಆದರೆ, ನಾಪತ್ತೆಯಾಗಿರುವ ಬೈಕ್‌‌ನ ಪತ್ತೆಗಾಗಿ ತನಿಖಾ ತಂಡ ಶೋಧ ಆರಂಭಿಸಿದೆ.

ಸಿಪಿಎಂ ಸ್ಥಳೀಯ ಮುಖಂಡ ಪೀತಾಂಬರನ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿತ್ತು.

ಈ ಘಟನೆಯನ್ನು  ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೇಕಲ ಪೊಲೀಸ್ ಠಾಣೆಗೆ ಜಾಥಾ ನಡೆಸಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English