ಮಂಗಳೂರು : ಉಳ್ಳಾಲದಲ್ಲಿ ಭಯೋತ್ಪಾದನೆ ನಡೆಯುತ್ತಿದೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಉದ್ಯಮಿ ಬಿ.ಎಂ ಬಾಷಾ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
“ಜನಜಾಗೃತಿ” ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿ ಮುತ್ತಿಗೆ ಯತ್ನಿಸಿದ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಸಹಿತ ಹಲವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಎಚ್‌ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಮೊದಲು ರಸ್ತೆಗಳಲ್ಲಿ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ನಂತರ ಬಿ.ಎಂ. ಬಾಷಾ ಅವರ ಮನೆಯ ಗೇಟ್ ಬಳಿ ತೆರಳಿ ಮನೆಗೆ ನುಗ್ಗಲು ಯತ್ನಿಸಿದ್ದರು.
ಈ ವೇಳೆ ಪೊಲೀಸರು ವಿಶ್ವಹಿಂದೂ ಪರಿಷತ್ ವಿಭಾಗ ಸಂಚಾಲಕ ಶರಣ್ ಸಹಿತ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಮನೆಯ ಸುತ್ತಮುತ್ತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
“ಜಿಲ್ಲೆಯಲ್ಲಿ ಲವ್ ಜಿಹಾದ್ ನಡೆಯುತ್ತಿದೆ. ಪ್ರೀತಿ-ಪ್ರೇಮದ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ. ಮಂಗಳೂರು ಭಯೋತ್ಪಾದಕ ಕೇಂದ್ರವಾಗುತ್ತಿದೆ ಎಂದು ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಆರೋಪಿಸಿದೆ.
ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾ ಸಂಚಾಲಕ್ ಪ್ರಸಾದ್ ಅತ್ತಾವರ, ಜಿಲ್ಲಾ ಸುರಕ್ಷ್ ಚೇತನ್ ಅಸೈಗೋಳಿ, ಬಲು ಅತ್ತಾವರ್, ಸಂತೋಷ್ ಅತ್ತಾವರ್, ಅರ್ಜುನ್ ಮಾಡೂರು, ಪ್ರಮೋದ್ ಪಂಪವೆಲ್ ಮೊದಲವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English