ಮಂಗಳೂರು :- ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.12 ಹಾಗೂ 13 ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12 ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸುಧಾಕರ್, ಶಾಸಕರಾದ ಯು.ಟಿ.ಖಾದರ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಸೇರಿದಂತೆ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಳಾ ರಾವ್ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.
ಬಜ್ಪೆ ವಿಮಾನ ನಿಲ್ದಾಣದಲ್ಲಿ ಇಂದು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರ ಹಣೆಗೆ ತಿಲಕವಿಟ್ಟು ಸ್ವಾಗತಿಸಲಾಯಿತು.
Click this button or press Ctrl+G to toggle between Kannada and English