ಉರ್ವಸ್ಟೋರ್‌ನ ದೇರೆಬೈಲ್ ನಲ್ಲಿ ಅಂಬೇಡ್ಕರ್ ಭವನ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ

12:30 PM, Thursday, August 12th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Ambedkar-Bhavana ಮಂಗಳೂರು : ದ.ಕ. ಜಿಲ್ಲಾಡಳಿತ, ಜಿಪಂ, ಮಂಗಳೂರು ಮಹಾನಗರಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ  ಉರ್ವಸ್ಟೋರ್‌ನ ದೇರೆಬೈಲ್ ಅಂಗಡಿಗುಡ್ಡೆಯಲ್ಲಿ ನಿರ್ಮಾಣಗೊಂಡ  ನೂತನ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಟ್ಟಡ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.12 ರ ಗುರುವಾರ ಲೋಕಾರ್ಪಣೆ ಮಾಡಿದರು.

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮೀನುಗಾರಿಕೆ ಹಾಗೂ ಬಂದರು ಸಚಿವ ಅಂಗಾರ ಎಸ್.   ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ ವೈ., ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಉಮಾನಾಥ ಎ. ಕೋಟ್ಯಾನ್, ಕೆ. ಪ್ರತಾಪಚಂದ್ರ ಶೆಟ್ಟಿ, ಬಿ.ಎಂ. ಫಾರೂಕ್, ಕೆ.ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೇಗೌಡ, ಪ್ರತಾಪ್ ಸಿಂಹ ನಾಯಕ್, ಕರ್ನಾಟಕ ಅಲೆಮಾರಿ- ಅರೆಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರ ಪ್ರೇಮಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Ambedkar-Bhavana
Ambedkar-Bhavana

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English