ಮಂಗಳೂರು : ದೇಶದಾದ್ಯಂತ 2021ರ ಆಗಸ್ಟ್ 15 ರಂದು 75 ನೇ ವರ್ಷದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಕೋವಿಡ್-19 ಸೋಂಕು ಕಾರಣ ಜಿಲ್ಲೆಯಲ್ಲಿ ಕೋವಿಡ್ 19 ಮಾರ್ಗಸೂಚಿಗಳು ಜಾರಿಯಲ್ಲಿದ್ದು, ಆಗಸ್ಟ್ 15 ರಂದು ವಾರಾಂತ್ಯ ಕರ್ಫ್ಯೂ ಕೂಡ ಜಾರಿಯಲ್ಲಿರುತ್ತದೆ.
ಆದ ಕಾರಣ ಈ ಬಾರಿಯ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಆಚರಣೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಸಾರ್ವಜನಿಕರು ಪಾಲಿಸಲು ಸೂಚಿಸಲಾಗಿದೆ.
ಕಾರ್ಯಕ್ರಮದ ಆಯೋಜಕರು ಧ್ವಜಾರೋಹಣ ನಡೆಸುವ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರನ್ನು ಸೇರಿಸದಂತೆ, ಕೋವಿಡ್ ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಬೇಕು.
ಸ್ವಾತಂತ್ರ್ಯ ದಿನಾಚರಣೆಯ ಘನತೆಗೆ ಧಕ್ಕೆ ಬಾರದಂತೆ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಬೇಕು.
ವಾರಾಂತ್ಯಕರ್ಫ್ಯೂ ಇರುವುದರಿಂದ ಸಾರ್ವಜನಿಕರು ಅನಾವಶ್ಯಕವಾಗಿ ಮನೆಯಿಂದ ಹೊರಗೆ ಬಾರದೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ರಾಜೇಂದ್ರ.ಕೆ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English