- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಅಂತ್ಯಕ್ರಿಯೆಯನ್ನು ನಡೆಸಲು ಒಂದು ಲಕ್ಷ ರೂ. ಇಟ್ಟು ಆತ್ಮಹತ್ಯೆ ಮಾಡಿಕೊಂಡ ದಂಪತಿ

chitrapura-suicide [1]ಮಂಗಳೂರು  :  ದಂಪತಿಗಳಿಬ್ಬರು ಡೆತ್ ನೋಟ್ ಬರೆದಿಟ್ಟು, ಮಂಗಳೂರು ಪೊಲೀಸ್ ಕಮಿಷನರ್ ಗೆ ಫೋನ್ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕುಳಾಯಿ ಚಿತ್ರಾಪುರಯಲ್ಲಿ ರೆಹಜಾ ಅಪಾರ್ಟ್ ಮೆಂಟ್ ನಲ್ಲಿ ಮಂಗಳವಾರ ಬೆಳಗ್ಗೆ  ನಡೆದಿದೆ.

ಮೃತರನ್ನು ರಮೇಶ್ ಸುವರ್ಣ ಮತ್ತು ಗುಣವತಿ ಸುವರ್ಣ ಎಂದು ಗುರುತಿಸಲಾಗಿದೆ. ಕೋವಿಡ್-19 ಸೋಂಕು ಮತ್ತು ಬ್ಲ್ಯಾಕ್ ಫಂಗಸ್ ಗೆ ಹೆದರಿ ಮೊದಲು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೂ ಮೊದಲು ಪತಿ ರಮೇಶ್ ಸುವರ್ಣ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು. ಶಶಿಕುಮಾರ್ ಅವರು ಕೂಡಲೇ ಕಾರ್ಯ ಪೃವೃತ್ತರಾಗಿ ಸ್ಥಳಕ್ಕೆ ಪೊಲೀಸ್ ಪಡೆ ಕಳುಹಿಸಿದರೂ ಅದಾಗಲೇ ದಂಪತಿ ನೇಣಿಗೆ ಶರಣಾಗಿದ್ದರು.

chitrapura-suicide [2]ಪತ್ನಿ ಗುಣವತಿ ಸುವರ್ಣ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಬ್ಲ್ಯಾಕ್ ಫಂಗಸ್ ನಿಂದ ಕಣ್ಣು ಮತ್ತು ಇತರ ಭಾಗಗಳನ್ನು ಕಳೆದುಕೊಂಡಿದ್ದನ್ನು ನೋಡಿದಾಗ, ನನ್ನ ಆರೋಗ್ಯದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ನೋಡಿದಾಗ ನನಗೂ ಭಯ ಕಾಡುತ್ತಿದೆ. ನನ್ನ ಗಂಡನಿಗೂ ಮೂರು ದಿನದಿಂದ ಕೋವಿಡ್ ಲಕ್ಷಣಗಳು ಕಾಣಿಸಿದ್ದು, ನಮಗೆ ಜೀವನವೇ ಬೇಡ ಎಂಬ ಮನಸ್ಥಿತಿಗೆ ಬಂದಿದ್ದೇವೆ.

ನನ್ನತಂದೆ ತಾಯಿ ತಮ್ಮನಿಗೆ ಕೋವಿಡ್ ಸೋಂಕು ತಾಗಿ ಈಗ ಚೇತರಿಸಿಕೊಂಡಿದ್ದಾರೆ. ತಾಯಿ ತುಂಬಾ ಕಷ್ಟದಿಂದ ಚೇತರಿಸಿಕೊಂಡಿದ್ದಾರೆ. ಹಾಗಾಗಿ ಅವರಿಗೆ ನಮ್ಮ ಅಂತ್ಯಕ್ರಿಯೆಯ ತೊಂದರೆ ಕೊಡಬಾರದು. ನಾನು ಮತ್ತು ಗಂಡ ನಿರ್ಧರಿಸಿದ ಪ್ರಕಾರ ಹಿಂದೂ ಸಂಘಟನೆಯ ಶರಣ್ ಪಂಪ್ ವೆಲ್ ಮತ್ತು ಸತ್ಯಜಿತ್ ಸುರತ್ಕಲ್ ಅವರು ನಮ್ಮ ಅಂತ್ಯಕ್ರಿಯೆಯನ್ನು ನಡೆಸಬೇಕು. ಅದಕ್ಕಾಗಿ ಒಂದು ಲಕ್ಷ ರೂ. ಇಟ್ಟಿದ್ದೇವೆ ಎಂದು ಬರೆಯಲಾಗಿದೆ.

ಅಲ್ಲದೆ ಮನೆಯಲ್ಲಿರುವ ವಸ್ತುಗಳನ್ನು ಬಡವರಿಗೆ ದಾನ ಮಾಡಿ ಎಂದೂ ಬರೆದಿದ್ದಾರೆ.

chitrapura-suicide [3]