ಪುತ್ತೂರು : ಪುತ್ತೂರಿನ ಕಬಕದಲ್ಲಿ ಗ್ರಾಮ ಸ್ವರಾಜ್ಯ ರಥಕ್ಕೆ ಎಸ್‌ಡಿಪಿಐ ಕಾರ್ಯಕರ್ತರು ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳಿಗೆ ಒಂದೇ ದಿನದಲ್ಲಿ ಜಾಮೀನು ಮಂಜೂರಾಗಿದೆ.
ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಝೀಜ್, ಸಮೀರ್, ಅಬ್ದುಲ್ ರಹಿಮಾನ್ ನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮೂವರಿಗೂ ಪುತ್ತೂರು ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.
Click this button or press Ctrl+G to toggle between Kannada and English