ಬೆಂಗಳೂರು : ಕೇಂದ್ರ ಕೃಷಿ ಮತ್ತ ರೈತಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಬಂಟ್ವಾಳ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕೇಂದ್ರದ ನೂತನ ಸಚಿವೆಯನ್ನು ಭಗವದ್ಗೀತೆ ನೀಡಿ ಅಭಿನಂದಿಸಿ ಸಚಿವೆ ಶೋಭಾ ಕರಂದ್ಲಾಜೆಯವರೊಂದಿಗೆ ಸಹೋದರತ್ವದ ಪ್ರತೀಕವಾದ ರಕ್ಷಾಬಂಧನ ಆಚರಿಸಿದರು. ಪ್ರತಿ ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ FPO(ರೈತರ ಉತ್ಪಾದಕರ ಸಂಸ್ಥೆ) ಪ್ರಾರಂಭಿಸುವುದಾಗಿ ಕೃಷಿ ಸಚಿವೆ ಈ ಸಂದರ್ಭದಲ್ಲಿ ಹೇಳಿದರು.
ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ರವರು ಕೋಟಿ-ಚೆನ್ನಯರ ಚರಿತ್ರೆ ಪುಸ್ತಕವನ್ನು ಸಚಿವೆಗೆ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ರಾಜ್ಯ ನಗರ ನೀರು ಮತ್ತು ಒಳಚರಂಡಿ ಮಂಡಳಿಯ ಸುಲೋಚನಾ ಜಿ.ಕೆ ಭಟ್,ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಬಂಟ್ವಾಳ ಬಿಜೆಪಿ ಪ್ರ.ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕಾರ್ಕಳ, ಪ್ರಮುಖರಾದ ರಮಾನಾಥ ರಾಯಿ,ಚಿದಾನಂದ ರೈ ಕಕ್ಯ,ಗಣೇಶ್ ರೈ ಮಾಣಿ,ಸುದರ್ಶನ್ ಬಜ, ಪುರುಷೋತ್ತಮ ಶೆಟ್ಟಿ ವಾಮದಪದವು,ನಂದರಾಮ ರೈ, ಆನಂದ ಶಂಭೂರು, ಪ್ರಕಾಶ್ ಅಂಚನ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English