ಮಂಗಳೂರು :ಬಿಜೆಪಿ ಪಕ್ಷವು ಮುಂದಿನ ಚುನಾವಣೆಗೆ ಸಾಕಸ್ಟು ಸಿದ್ದತೆಗಳನ್ನು ಮಾಡಿಕೊಂಡಿದ್ದು, ಮುಂದಿನ ಚುನಾವಣೆಯಲ್ಲೂ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸ ತಮಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಮಂಗಳೂರಿನ ಪತ್ರಿಕಾ ಭವನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರಕಾರದ 12.5 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣವಾಗಿರುವ ಪತ್ರಿಕಾ ಭವನದ ಸಭಾಂಗಣಕ್ಕೆ ಅವಶ್ಯ ಇರುವ ಸೀಲಿಂಗ್ ಮತ್ತು ವಿದ್ಯುತ್ ಜೋಡಣೆ ಕಾಮಗಾರಿಗೆ ಅವಶ್ಯ ನೆರವು ಒದಗಿಸುವುದಾಗಿ ಭರವಸೆ ನೀಡಿದರು.
ಬಿಜೆಪಿಯೊಳಗೆ ಸಣ್ಣ ಮಟ್ಟದ ಆಂತರಿಕ ತಲ್ಲಣಗಳು ಇದ್ದರೂ ಕೂಡ ಕಾರ್ಯಕರ್ತರ ಮಧ್ಯೆ ಯಾವುದೇ ಒಡಕು ಇಲ್ಲ. ಬಿಜೆಪಿಯ ರಾಜ್ಯಾಧ್ಯಕ್ಷ ಹುದ್ದೆಯ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರದಲ್ಲೇ ನೂತನ ಅಧ್ಯಕ್ಷರನ್ನು ನೇಮಿಸಲಾಗುವುದು ಎಂದರು. ಬಿಜೆಪಿ ಪ್ರಮುಖರಾದ ಶ್ರೀಕರ ಪ್ರಭು, ಪ್ರಸ್ಕ್ಲಬ್ ಅಧ್ಯಕ್ಷ ರಾಮಕೃಷ್ಣ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಾಯಕ್ ಇಂದಾಜೆ, ಉಪಾಧ್ಯಕ್ಷ ಅನಿಲ್ ಕುಮಾರ್ ಜೋಗಿ ಮುಂತಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English