- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರು-ಮೊಂಟೆಪದವು ಮಾರ್ಗವಾಗಿ ಮುಡಿಪುವಿಗೆ ಸರಕಾರಿ ಬಸ್ ಸಂಚಾರ ಆರಂಭ

ksrtc-bus [1]ಮಂಗಳೂರು :  ಮಂಗಳೂರು-ಮೊಂಟೆಪದವು ಮಾರ್ಗವಾಗಿ ಮುಡಿಪುವಿಗೆ ಸರಕಾರಿ ಬಸ್ ಸಂಚಾರ ಆರಂಭಿಸಿದ ಹಿನ್ನಲೆಯಲ್ಲಿ ಮೊಂಟೆಪದವು ನಾಗರಿಕರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಮಂಗಳೂರಿನಿಂದ ನಾಟೆಕಲ್-ಮೊಂಟೆಪದವು ಮಾರ್ಗವಾಗಿ ಮುಡಿಪುವಿಗೆ ಸರಕಾರಿ ಬಸ್ ಒದಗಿಸುವಂತೆ ಸುಮಾರು 10 ವರ್ಷಗಳಿಂದ ಈ ಭಾಗದ ಜನರು ಒತ್ತಾಯಿಸುತ್ತಾ ಬಂದಿದ್ದರಲ್ಲದೆ, ಇಲ್ಲಿನ ಸಂಘ ಸಂಸ್ಥೆಗಳು ಹಲವು ಬಾರಿ ಹೋರಾಟವನ್ನೂ ನಡೆಸಿತ್ತು. ಸಂಬಂಧಪಟ್ಟವರಿಗೆ ಮನವಿಯನ್ನೂ ಸಲ್ಲಿಸಿತ್ತು.

10 ವರ್ಷದ ಹೋರಾಟದ ಫಲವಾಗಿ ಸರಕಾರಿ ಬಸ್ ಓಡಾಟ ಆರಂಭಿಸಿದ ಹಿನ್ನೆಲೆಯಲ್ಲಿ ನಾಗರಿಕರು ಸಂಭ್ರಮಿಸಿದರು.