ಮಂಗಳೂರು : ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ ಅವುಗಳ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕನ್ನಾಗಿ ಮಾಡಿ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ ಸೂಚನೆಗೆ ಸ್ವಾಗತಿಸುತ್ತೇವೆ ಎಂದು ವಿಶ್ವ ಹಿಂದು ಪರಿಷತ್ ಹೇಳಿದೆ.
ಗೋಹತ್ಯೆ ಆರೋಪದಲ್ಲಿ ಜಾವೇದ್ ಎಂಬಾತನಿಗೆ ಜಾಮೀನು ನಿರಾಕರಿಸುವ ವೇಳೆ ಅಲಹಾಬಾದ್ ಹೈಕೋರ್ಟ್ ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ ಅವುಗಳ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕನ್ನಾಗಿ ಮಾಡಿ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದೆ ಅಲ್ಲದೆ ದೇಶದ ಸಂಸ್ಕೃತಿ ಮತ್ತು ನಂಬಿಕೆಗೆ ಧಕ್ಕೆಯಾದಾಗ ಇಡೀ ದೇಶ ದುರ್ಭಲವಾಗುತ್ತದೆ. ಮೂಲಭೂತ ಹಕ್ಕು ಗೋಮಾಂಸ ತಿನ್ನುವವರಿಗೆ ಮಾತ್ರ ಸಂಬಂಧಿಸಿದ್ದಲ್ಲ ಗೋವನ್ನು ಪೂಜಿಸುವವರು, ಆರ್ಥಿಕವಾಗಿ ಅವಲಂಬಿಸಿರುತ್ತಾರೋ ಅವರಿಗೂ ಅರ್ಥಪೂರ್ಣ ಜೀವನ ನಡೆಸುವ ಹಕ್ಕಿದೆ. ಜೀವಿಸುವ ಹಕ್ಕು ಕೊಲ್ಲುವ ಹಕ್ಕಿಗಿಂತ ಮೇಲಿನದು. ಗೋಮಾಂಸ ತಿನ್ನುವವರ ಹಕ್ಕನ್ನು ಮೂಲಭೂತ ಹಕ್ಕೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸೂಚನೆ ನೀಡಿದನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ ಮತ್ತು ಈ ನಿಟ್ಟಿನಲ್ಲಿ ನ್ಯಾಯಾಧೀಶರ ಸೂಚನೆ ನೀಡಿದ್ದು ವಿಶ್ವ ಹಿಂದು ಪರಿಷತ್ತಿನ ಹಲವು ದಶಕಗಳ ಹೋರಾಟಕ್ಕೆ ಫಲ ಸಿಕ್ಕಂತಾಗಿದೆ ಆದಷ್ಟು ಬೇಗ ಗೋವಂಶ ಹತ್ಯೆಯನ್ನು ಸಂಪೂರ್ಣ ದೇಶದಲ್ಲಿ ನಿಷೇಧಿಸಿ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಲು ಸಮಸ್ತ ಹಿಂದೂಗಳ ಪರವಾಗಿ ಕೇಂದ್ರ ಸರಕಾರಕ್ಕೆ ಮನವಿಮಾಡುತ್ತದೆ ಎಂದು ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English