ಕಡಬ : ಯುವತಿ ಯೊಬ್ಬಳ ಫೇಸ್ ಬುಕ್ ಖಾತೆ ನಕಲಿ ಮಾಡಿದ್ದಕ್ಕೆ ಸೈಬರ್ ಕ್ರೈಂ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ಪೊಲೀಸರು ಕಡಬದ ಯುವಕನೋರ್ವನನ್ನು ಶನಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ, ಮಂಗಳೂರಿನಲ್ಲಿ ಟ್ರೇಡಿಂಗ್ ವ್ಯವಹಾರ ನಡೆಸುತ್ತಿರುವ ಸಂಜಯ್ ಕೃಷ್ಣ ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಪಶ್ಚಿಮ ಬಂಗಾಳದ ಯುವತಿಯೋರ್ವಳ ಹೆಸರಿನ ನಕಲಿ ಸಾಮಾಜಿಕ ಜಾಲತಾಣ ಖಾತೆ ತೆರೆದ ಆರೋಪದ ಮೇರೆಗೆ ಸಂಜಯ್ ಕೃಷ್ಣನನ್ನು ಬಂಧಿಸಲಾಗಿದೆ.
ತನ್ನ ಹೆಸರಿನ ನಕಲಿ ಸಾಮಾಜಿಕ ಜಾಲತಾಣ ಖಾತೆಯನ್ನು ಯಾರೋ ಅಪರಿಚಿತರು ನಕಲಿಸಿ ಉಪಯೋಗಿಸಿರುವ ಬಗ್ಗೆ ಯುವತಿ ಪಶ್ಚಿಮ ಬಂಗಾಳದಲ್ಲಿ ದೂರು ದಾಖಲಿಸಿದ್ದಳು.
ಸೈಬರ್ ಕ್ರೈಂನಡಿ ದೂರು ದಾಖಲಿಸಿಕೊಂಡಿರುವ ಕೊಲ್ಕತ್ತಾ ಪೊಲೀಸರು ಇಂದು ಕಡಬಕ್ಕೆ ಆಗಮಿಸಿ ಆರೋಪಿ ಸಂಜಯ್ ಕೃಷ್ಣನನ್ನು ಬಂಧಿಸಿದ್ದು, ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Click this button or press Ctrl+G to toggle between Kannada and English