ಹೋಂ ಸ್ಟೇ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಮರಾಮನ್ ಶರಣ್‌ರಾಜ್ ಬಂಧನ

1:20 PM, Thursday, January 3rd, 2013
Share
1 Star2 Stars3 Stars4 Stars5 Stars
(No Ratings Yet)
Loading...

Sharan Rajಮಂಗಳೂರು : ಹೋಂ ಸ್ಟೇ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪತ್ರಕರ್ತರನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕ್ಯಾಮರಾಮನ್ ಶರಣ್‌ರಾಜ್ ಬಂಧಿತ ಆರೋಪಿಯಾಗಿದ್ದಾರೆ. ಇವರನ್ನು ಬುಧವಾರ ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಒಂದು ದಿನ ಪೊಲೀಸ್ ಕಸ್ಟ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಹೋಂ ಸ್ಟೇ ದಾಳಿ ಸಂದರ್ಭ ಕ್ಯಾಮರಾಮನ್ ಶರಣ್‌ರಾಜ್ ಸ್ಥಳಕ್ಕೆ ಸುದ್ದಿ ಸಂಗ್ರಹಕ್ಕಾಗಿ ತೆರಳಿದ್ದರು. ಆದರೆ ಘಟನೆ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಸಕಾಲದಲ್ಲಿ ಪೊಲೀಸರಿಗೆ ಮಾಹಿತಿ ನೀಡದ ಕಾರಣಕ್ಕೆ ಅವರ ವಿರುದ್ಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ವಾರಂಟ್ ಜಾರಿಗೊಳಿಸಿದ್ದರು. ಒಟ್ಟಾರೆ ಹೋಂ ಸ್ಟೇ ಪ್ರಕರಣಕ್ಕೆ ಸಂಬಂಧಿಸಿ ನವೀನ ಸೂರಿಂಜೆ ಮತ್ತು ಇದೀಗ ಕ್ಯಾಮರಾಮನ್ ಶರಣ್‌ರಾಜ್ ಸೇರಿದಂತೆ ಒಟ್ಟು ಇಬ್ಬರು ಪತ್ರಕರ್ತರ ಬಂಧನವಾದಂತಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English