ಮಂಗಳೂರು : ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡರಾದ ಸದಾಶಿವ್ ಉಳ್ಳಾಲ ರವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ವೃತ್ತಿಯಲ್ಲಿ ವಕೀಲರಾಗಿರುವ ಸದಾಶಿವ ಉಳ್ಳಾಲ ರವರು ಎಮ್.ಎ ಪದವೀಧರರಾಗಿದ್ದಾರೆ.1978 ರಲ್ಲಿ ರಾಜಕೀಯಕ್ಕೆ ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೇಶಿಸಿದ ಶ್ರೀಯುತರು ನಂತರ ಪಕ್ಷ ನೀಡಿದ ಅನೇಕ ಹುದ್ದೆಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿದ ಅನುಭವವಿದೆ.
1982 ರಿಂದ 1985ರ ವರೆಗೆ ಮೂರು ವರ್ಷಗಳ ಅಂದಿನ ಹಣಕಾಸು ರಾಜ್ಯ ಸಚಿವರಾದ ಶ್ರೀ ಜನಾರ್ದನ ಪೂಜಾರಿರವರ ಆಪ್ತ ಸಹಾಯಕರಾಗಿ ಸೇವೆ ಸಲ್ಲಿಸಿದ್ದರು.1984 ರಿಂದ 2017 ರ ವರೆಗೆ ಭಗವತೀ ಸಹಕಾರ ಬ್ಯಾಂಕಿನ ನಿರ್ದೇಶಕರಾಗಿದ್ದ ಇವರು 2012 ರಿಂದ 2017ರ ವರೆಗೆ ಅಧ್ಯಕ್ಷರಾಗಿರಯೂ ಸೇವೆ ಸಲ್ಲಿಸಿದ್ದರು.
ಪ್ರಸ್ತುತ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರಾಗಿಯೂ,ಭಾರತೀಯ ತೀಯ ಸಮಾಜ ಕೇಂದ್ರ ಸಮಿತಿಯ ಅಧ್ಯಕ್ಷರಾಗಿಯೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಸ್ತುತ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಅವಧಿ ಐದು ವರ್ಷ ಮುಗಿದ ಹಿನ್ನಲೆಯಲ್ಲಿ ಈಗಾಗಲೇ ಜಿಲ್ಲೆಯ ಇತರ ಬ್ಲಾಕ್ ನಲ್ಲೂ ಕೂಡಾ ಅವಧಿ ಮುಗಿದ ಅಧ್ಯಕ್ಷರ ಬದಲಾವಣೆಯಾಗಿದ್ದು,ಜಿಲ್ಲಾ ಕಾಂಗ್ರೆಸ್ ಅವಧಿ ಮುಗಿದ ಬ್ಲಾಕಿನ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚೆ ನಡೆಸಿ ಬದಲಾವಣೆಗೆ ಮುಂದಾಗಿದೆ.ಅಂತೆಯೇ ಉಳ್ಳಾಲ ಬ್ಲಾಕ್ ನ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ಒಕ್ಕೂರಲಿನ ಅಭಿಪ್ರಾಯದ ಮೇರೆಗೆ ಜಿಲ್ಲಾ ಕಾಂಗ್ರೆಸ್ ನಾಯಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಸದಾಶಿವ ಉಳ್ಳಾಲ ರವರನ್ನು ಉಳ್ಳಾಲ ಬ್ಲಾಕ್ ಅಧ್ಯಕ್ಷರನ್ನಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಅದೇಶ ಹೊರಡಿಸಿದ್ದಾರೆ.
Click this button or press Ctrl+G to toggle between Kannada and English