ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಲಿಕೆಯಾಗಲಿದೆ : ಶಾಸಕ ವೇದವ್ಯಾಸ್ ಕಾಮತ್

10:50 PM, Thursday, September 9th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Vedavyas Kamathಮಂಗಳೂರು  : ಕೋವಿಡ್ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಲಿಕೆಯಾಗಲಿದೆ. ಈ ವಾರದಿಂದಲೇ ಕ್ರಮ ಜಾರಿಗೊಳಿಸಲಾಗುತ್ತದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತಿದ್ದ ಕೋವಿಡ್ ನಿಯಂತ್ರಿಸಲು ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಿಲಗೊಳಿಸುವುದರಿಂದ ಸಾರ್ವಜನಿಕರ ಚಟುವಟಿಕೆಗಳಿಗೆ ಸಹಕಾರವಾಗಲಿದೆ. ಎಲ್ಲಾ ವರ್ಗದ ಜನರಿಗೂ ಸಹಕಾರವಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ವಾರಾಂತ್ಯದ ಕರ್ಫ್ಯೂ ಸಡಿಸಿದರೂ ಸಾರ್ವಜನಿಕರು ತಮ್ಮ ಆರೋಗ್ಯದ ಸುರಕ್ಷತಾ ದೃಷ್ಟಿಯಿಂದ ಜಾಗರೂಕರಾಗಿರಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸುವ ನಿಟ್ಟಿನಲ್ಲಿ ಸ್ವಯಂಪ್ರೇರಿತರಾಗಿ ಆಡಳಿತ ವ್ಯವಸ್ಥೆಯೊಂದಿಗೆ ಕೈ ಜೋಡಿಸಬೇಕು. ನಿಯಮಾವಳಿಗಳ‌ ಸಡಿಲಿಕೆಯಿಂದ ಮೈಮರೆತು ಪುನಃ ಜೀವನವನ್ನು ಸಂಕಷ್ಟಕ್ಕೆ ಒಡ್ಡುವ ಬದಲು ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸಬೇಕು. ಕೋವಿಡ್ ಸೋಂಕು ಉಲ್ಬಣಗೊಳ್ಳದಂತೆ ಜಾಗರೂಕತೆಯಿಂದಿರಬೇಕೆಂದು ಸಾರ್ವಜನಿಕರಲ್ಲಿ ಶಾಸಕ ಕಾಮತ್ ಮನವಿ ಮಾಡಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English