ಅದಾನಿ ಸಂಸ್ಥೆಯ ಹೆಸರು ತೆಗೆದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೊಸ ಬೋರ್ಡ್

9:13 PM, Saturday, September 11th, 2021
Share
1 Star2 Stars3 Stars4 Stars5 Stars
(No Ratings Yet)
Loading...

Mangalore Airportಮಂಗಳೂರು : ಅದಾನಿ ಸಂಸ್ಥೆಯು ಮಂಗಳೂರು ವಿಮಾನ ನಿಲ್ದಾಣದ ಅದಾನಿ ಏರ್ಪೋರ್ಟ್ ಹೆಸರು ತೆಗೆದು ಹಾಕಿ ಮತ್ತೆ ಎಲ್ಲಾ ಬೋರ್ಡ್ಗಳಲ್ಲೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ  ಎಂದು ನಮೂದಿಸಿದೆ.

ಮಂಗಳೂರು ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಿ ಅದಾನಿ ಏರ್ಪೋರ್ಟ್ ಎಂದು ನಾಮಕರಣ ಮಾಡಿರುವುದರಿಂದ ಮುಂದೆ ಈ ವಿಮಾನ ನಿಲ್ದಾಣವನ್ನು ಅದಾನಿ ಸಂಸ್ಥೆಯೇ ನಿರ್ಮಿಸಿದೆ ಎಂಬ ತಪ್ಪು ಅಭಿಪ್ರಾಯ ಬಿಂಬಿತವಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾನೂನು ಹೋರಾಟ ಮಾಡಬೇಕಾಯಿತು. ನಮ್ಮ ಪ್ರಯತ್ನಕ್ಕೆ ಯಶಸ್ಸು ದೊರಕಿದೆ. ಇದು ನಮಗೆ ಸಂತಸ ತಂದಿದೆ ಎಂದು ಹೇಳಿದರು ಎಂದು ಸಾಮಾಜಿಕ ಕಾರ್ಯಕರ್ತ ದಿಲ್ ರಾಜ್ ಆಳ್ವ  ಹೇಳಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಣೆ ಮಾಡಲೆಂದು ಕೇಂದ್ರ ಸರಕಾರ ಅದಾನಿ ಸಂಸ್ಥೆಗೆ ಗುತ್ತಿಗೆ ನೀಡಿತ್ತು. ಆದರೆ, ವಿಮಾನ ನಿಲ್ದಾಣ ತಮ್ಮ ಸುಪರ್ದಿಗೆ ಬಂದ ತಕ್ಷಣ ಅದಾನಿ ಸಂಸ್ಥೆಯು ಅದಾನಿ ಏರ್ಪೋರ್ಟ್ ಎಂದು ಮರು ನಾಮಕರಣ ಮಾಡಿತ್ತು. ಇದನ್ನು ವಿರೋಧಿಸಿ ಕಾನೂನು ಹೋರಾಟವನ್ನು ಮಾಡಲು ಆರ್ಟಿಐ ಮೂಲಕ ಎಲ್ಲಾ ದಾಖಲೆಗಳನ್ನು ಕೇಳಿದ್ದೆ ಆದರೆ, ಇದಕ್ಕೆ ಅದಾನಿ ಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡದಿದ್ದರೂ, ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದಿಂದ ತನಗೊಂದು ಪತ್ರ ಬಂದಿತ್ತು. ಅದರಲ್ಲಿ ವಿಮಾನ ನಿಲ್ದಾಣದ ಅಧಿಕಾರಿಗಳು ‘ಯಾವುದೇ ಸಂಸ್ಥೆ ಗುತ್ತಿಗೆ ಪಡೆದಿದ್ದರೂ ಬ್ರ್ಯಾಂಡಿಂಗ್ ಮಾಡಲು ಅವಕಾಶವಿಲ್ಲ ಎಂದಿದ್ದರು.

ಅದಾನಿ ಸಂಸ್ಥೆಯೊಂದಿಗೆ ಮಾಡಿರುವ ಒಪ್ಪಂದದಲ್ಲಿಯೂ ಬ್ರ್ಯಾಂಡಿಂಗ್ ಮಾಡುವ ಬಗ್ಗೆ, ಹೆಸರು ಬದಲಾವಣೆ ಮಾಡುವ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ. ಅದನ್ನು ನಾವು ಸ್ಪಷ್ಟವಾಗಿ ತಿಳಿಸಿದ್ದೇವೆ. ಈ ಬಗ್ಗೆ ನೋಟಿಸ್ ಕೂಡ ಜಾರಿಗೊಳಿಸಿದ್ದೇವೆ’ ಎಂದು ಹೇಳಿದ್ದರು.ಅದಾನಿ ಸಂಸ್ಥೆಯು ಕಳೆದ ಒಂದು ತಿಂಗಳ ಹಿಂದೆ ಅದಾನಿ ಏರ್ಪೋರ್ಟ್ ಎಂಬ ಹೆಸರನ್ನು ಅಧಿಕೃತ ಟ್ವಿಟರ್ ಖಾತೆ ಹಾಗೂ ಫೇಸ್ಬುಕ್ ಖಾತೆಯಲ್ಲಿ ಅಳಿಸಿ ಹಾಕಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬರೆದಿತ್ತು. ನಿನ್ನೆ ವಿಮಾನ ನಿಲ್ದಾಣದ ಎಲ್ಲಾ ಬೋರ್ಡ್ಗಳಲ್ಲಿದ್ದ ಅದಾನಿ ಏರ್ಪೋರ್ಟ್ ಎಂಬ ಹೆಸರನ್ನು ತೆಗೆದು ಹಾಕಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬರೆದಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English