ಮಂಗಳೂರು : ದಿಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ವಿರೋಧಿಸಿ ಹಾಗು ಮೃತಳ ಆತ್ಮಕ್ಕೆ ಶಾಂತಿ ಕೋರಿ ನಗರದ ವಿವಿಧ ಫಿಸಿಯೋಥೆರಪಿ ಕಾಲೇಜುಗಳ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ಜನವರಿ 2 ಬುಧವಾರ ನಗರದ ನೆಹರೂ ಮೈದಾನದಲ್ಲಿ ಮೊಂಬತ್ತಿ ಉರಿಸಿ ಎರಡು ನಿಮಿಷಗಳ ಕಾಲ ಮೌನ ಆಚರಿಸಲಾಯಿತು.
ಈ ಸಂದರ್ಭ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯ ಅಭಿಲಾಷ್ ಮಾತನಾಡಿ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ಆದಷ್ಟು ಬೇಗ ನೀಡಿ ಇಂತಹ ಪ್ರಕರಣಗಳು ನಾಗರೀಕ ಸಮಾಜದಲ್ಲಿ ಮರುಕಳಿಸಬಾರದು ಆಗ ಮಾತ್ರ ಮೃತ ವಿದ್ಯಾರ್ಥಿಯ ಆತ್ಮಕ್ಕೆ ಶಾಂತಿ ದೊರಕಲು ಸಾಧ್ಯ ಎಂದವರು ಹೇಳಿದರು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ವಿದ್ಯಾರ್ಥಿ ಮುಖಂಡರು ಈ ಹೇಯ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿ ದೇಶಾದ್ಯಂತ ನಾಗರೀಕ ಸಂಘಟನೆಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟಿಸಿ ಈ ಕುರಿತು ಚರ್ಚೆ ನಡೆಯುತ್ತಿರುವಾಗಲೇ ದೇಶಾದ್ಯಂತ ಹಾಗು ಮಂಗಳೂರಿನಲ್ಲಿ ಇಂತಹ ಪ್ರಕರಣಗಳು ಮತ್ತಷ್ಟು ವರದಿಯಾಗುತ್ತಿರುವುದರ ಮೂಲಕ ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ ಈ ಬಗ್ಗೆ ಸರಕಾರ ಮತ್ತು ನ್ಯಾಯಾಲಯ ಇನ್ನು ಕೂಡ ಎಚೆತ್ತುಕೊಳ್ಳದಿದ್ದಲಿ ಮುಂದಿನ ಅನಾಹುತಗಳಿಗೆ ಹೊಣೆಯಾಗಬೇಕಾಗುತ್ತದೆ ಎಂದರು.
ನಗರದ ವಿವಿಧ ಫಿಸಿಯೋಥೆರಪಿ ಕಾಲೇಜುಗಳಾದ ಶ್ರೀನಿವಾಸ ಕಾಲೇಜು, ಮಸೂದ್ ಕಾಲೇಜು, ಫಾದರ್ ಮುಲ್ಲರ್ ಕಾಲೇಜು, ಎಂ.ವಿ.ಶೆಟ್ಟಿ ಕಾಲೇಜು, ಎ.ಜೆ.ಫಿಸಿಯೋಥೆರಪಿ ಕಾಲೇಜು ಹಾಗೂ ನೇತಾಜಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮೌನಾಚರಣೆ ಯಲ್ಲಿ ಭಾಗವಹಿಸಿದಿದ್ದವು.
Click this button or press Ctrl+G to toggle between Kannada and English