ಮಾಂಸ ತಿನ್ನುವ ಅಸೆ ತೋರಿಸಿ, ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

12:43 AM, Monday, September 13th, 2021
Share
1 Star2 Stars3 Stars4 Stars5 Stars
(No Ratings Yet)
Loading...

Arif pasha  ಮಂಗಳೂರು  :  ಐದು ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಬಂಧಿತ ಆರೋಪಿಯನ್ನು ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಎಂದು ಗುರುತಿಸಲಾಗಿದೆ.

ಆರೀಫ್ ಪಾಷಾ ಕೂಲಿ ಕಾರ್ಮಿಕನಾಗಿದ್ದಾನೆ. ಬಾಲಕಿ ತಂದೆಗೆ ಪರಿಚಿತನಾಗಿರುವ ಆರೋಪಿ ಆಕೆಗೆ ತಿನ್ನಲು ಮಾಂಸ ಕೊಡಿಸುವುದಾಗಿ ನಂಬಿಸಿ , ಮನೆಯಿಂದಲೇ ಕರೆತಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ ಬಾಲಕಿ ಓಡಿ ತಪ್ಪಿಸುವ ಸಂದರ್ಭ ಅದೇ ದಾರಿಯಲ್ಲಿ ಬರುತ್ತಿದ್ದ ಸಾಮಾಜಿಕ ಕಾರ್ಯಕರ್ತ ತಲಪಾಡಿಯ ಯಶು ಪಕಳ ದಂಪತಿ ಬಾಲಕಿಯನ್ನು ಗಮನಿಸಿದ್ದು ಕೇಳಿದಾಗ ನಡೆದ ಕೃತ್ಯವನ್ನು ಬಾಲಕಿ ತಿಳಿಸಿದ್ದಾಳೆ.

ಸ್ಥಳೀಯರ ಸಹಕಾರದಿಂದ ಆರೋಪಿ ಆರೀಫ್ ಪಾಷಾ ನನ್ನು ಹಿಡಿದಿದ್ದಾರೆ. ಬಳಿಕ ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English