ಮಂಗಳೂರು : ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಎರಡು ದಿನಗಳ ಬಳಿಕ ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ಹೇಳಿದೆ.
ಪತ್ನಿ ಬ್ಲೋಸಂ ಫರ್ನಾಂಡಿಸ್ ಅವರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವಂತೆ ಸೋನಿಯಾರಿಗೆ ಬ್ಲೋಸಂ ವಿನಂತಿಸಿದ್ದಾರೆ. ಆಸ್ಕರ್ ನಿಧನ ದೇಶಕ್ಕಾಗಿರುವ ನಷ್ಟ ಎಂದು ಸೋನಿಯಾ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೊನೆಯ ಕ್ಷಣದಲ್ಲಿ ಆಸ್ಕರ್ ಪಾರ್ಥೀವ ಶರೀರವನ್ನು ಮಂಗಳೂರಿನ ಯೇನೆಪೋಯ ಆಸ್ಪತ್ರೆಯಿಂದ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
‘ಕೃಷ್ಣಾರ್ಜುನ ಕಾಳಗ’ ಯಕ್ಷಗಾನದಲ್ಲಿ ಆಗ ಕೇಂದ್ರ ಸಚಿವರಾಗಿದ್ದ ಆಸ್ಕರ್ ಫರ್ನಾಂಡೀಸ್ ಮತ್ತು ಎಂ.ವೀರಪ್ಪ ಮೊಯಿಲಿ ಅವರು ಯಕ್ಷಗಾನ ವೇಷ ಧರಿಸಿ ಅಭಿನಯಿಸಿದ್ದರು. ದೆಹಲಿ ಕರ್ನಾಟಕ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರಿನ ಕರ್ನಾಟಕ ಯಕ್ಷಭಾರತಿ ತಂಡವು ಭಾಸ್ಕರ ರೈ ಕುಕ್ಕುವಳ್ಳಿ ಅವರ ನೇತೃತ್ವದಲ್ಲಿ ಯಕ್ಷಗಾನ ಆಯೋಜಿಸಿತ್ತು.
Click this button or press Ctrl+G to toggle between Kannada and English