ಎಜೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ 20 ವರ್ಷದ ಯುವತಿಯ ಅಂಗಾಂಗ ದಾನ

1:14 PM, Tuesday, September 14th, 2021
Share
1 Star2 Stars3 Stars4 Stars5 Stars
(No Ratings Yet)
Loading...

Kavanaಮಂಗಳೂರು  : ಎಜೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ 20 ವರ್ಷದ ಯುವತಿಯೊಬ್ಬಳು ಹಲವರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ .

ಆಕೆಯ ಹೆಸರು ರಟ್ಟಿಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದ ಶಿಕಾರಿಪುರದ ಗಾರ್ಮೆಂಟ್ಸ್ ನಲ್ಲಿ  ಕೆಲಸ ಮಾಡುತ್ತಿದ್ದ ಕವನ ಮಳ್ಳಯ್ಯ ಹಿರೇಮಠ.

ಸೆ.9ರಂದು ಹೊನ್ನಾಳಿ ತಾಲೂಕು ಸೊರಟೂರು ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಕವನ ಗಂಭೀರ ಗಾಯಗೊಂಡಿದ್ದರು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕವನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಕೋಮಾಗೆ ತಲುಪಿದ್ದರು. ಅವರು ಮಿದುಳು ನಿಷ್ಕ್ರಿಯಗೊಂಡಿತ್ತು.

ಮಗಳಂತೂ ಇನ್ನು ಬದುಕುವಿದಿಲ್ಲ, ಅವಳ ಅಂಗಾಂಗವಾದರೂ ಇತರರಿಗೆ ಬದುಕು ನೀಡಲಿ ಎಂದು ನಿರ್ಧರಿಸಿದ ಮೃತಳ ಕುಟುಂಬಸ್ಥರು ವೈದ್ಯರೊಂದಿಗೆ ಚರ್ಚಿಸಿದರು. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೃತಳ ಕುಟುಂಬಸ್ಥರು ಯುವತಿಯ ಕಿಡ್ನಿ, ಹೃದಯ, ಲಿವರ್, ಕಣ್ಣು, ಚರ್ಮ ದಾನ ಮಾಡಿದರು. ತಕ್ಷಣವೇ ಅಂಗಾಂಗಗಳನ್ನು ಬೇರೆ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಇದರಿಂದ ನಾಲ್ವರ ಪ್ರಾಣ ಉಳಿದಿದೆ.

ಯುವತಿಯ ಮೃತದೇಹಕ್ಕೆ ಎಜೆ ಆಸ್ಪತ್ರೆ ವೈದ್ಯರು ಹೂವಿನ ಹಾರ ಹಾಕಿ ಅಂತಿಮ ವಿದಾಯ ಹೇಳಿದ ದೃಶ್ಯ

     

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English