ಕಾರ್ಕಳ : ಅರ್ಚಕ ನೇಣು ಬಿಗಿದು ಆತ್ಮಹತ್ಯೆ

3:14 PM, Tuesday, September 14th, 2021
Share
1 Star2 Stars3 Stars4 Stars5 Stars
(No Ratings Yet)
Loading...

Sharmaಕಾರ್ಕಳ : ದೇವಳವೊಂದರ ಅರ್ಚಕ ರವಳನಾಥ ಶರ್ಮ(32) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ನಗರದ ಸ್ಟೇಟ್‌ಬ್ಯಾಂಕ್ ಇಂಡಿಯಾ ಬಳಿಯ ಮಹಾಲಸ ನಿವಾಸಿಯಾಗಿರುವ ಅವರು ಎಂಬಿಎ ಪದವೀದಾರರಾಗಿದ್ದರು.  ಈ ಹಿಂದೆ ಕಾರ್ಕಳದ ಕಾಲೇಜುವೊಂದರಲ್ಲಿ ಅತಿಥಿ ಉಪನ್ಯಾಸಕರಾಗಿ ದುಡಿದಿದ್ದರು.

ಮೃತರು ತಂದೆ,ತಾಯಿ,ತಮ್ಮ,ಪತ್ನಿ ಹಾಗೂ ಪುತ್ರಿಯರನ್ನು ಅಗಲಿದ್ದಾರೆ.

ನಗರ ಠಾಣಾಧಿಕಾರಿ ಘಟನಾ ಸ್ಥಳಕ್ಕೆ ಅಗಮಿಸಿ ಮಹಜರು ನಡೆಸಿದ್ದಾರೆ. ಮಾನಸಿಕ ಖಿನ್ನತೆ ಘಟನೆಗೆ ಕಾರಣವೆನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.

     

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English