ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ

8:45 PM, Tuesday, September 14th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Prashanth Poonjalakatte
ಬಂಟ್ವಾಳ : ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ ವಿಶ್ವಕರ್ಮ ಆಯ್ಕೆಯಾಗಿದ್ದಾರೆ.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿದರು.

ನೂತನ ಉಪಾಧ್ಯಕ್ಷರಾಗಿ ಯಾದವ್ ಅರ್ಗಬೈಲ್, ಜೊತೆ ಕಾರ್ಯದರ್ಶಿಯಾಗಿ ಇಮ್ತಿಯಾಝ್ ಶಾ ತುಂಬೆ, ಕೋಶಾಧಿಕಾರಿಯಾಗಿ ವೆಂಕಟೇಶ್ ಬಂಟ್ವಾಳ ಅವರು ಆಯ್ಕೆಯಾದರು.

ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಅಲಿ ವಿಟ್ಲ ವರದಿ ವಾಚಿಸಿದರು. ಕೋಶಾಧಿಕಾರಿ ಯಾದವ್ ಅಗ್ರಬೈಲ್ ಲೆಕ್ಕಪತ್ರ ಮಂಡಿಸಿದರು.

Bantwal Journalist

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English