ರಾಜ್ಯದಾದ್ಯಂತ ರಸ್ತೆ ಅಗಲೀಕರಣಕ್ಕೆ ಪುರಾತನ ದೇವಸ್ಥಾನಗಳ ತೆರವು, ವಿಶ್ವ ಹಿಂದು ಪರಿಷತ್, ಬಜರಂಗದಳ ಖಂಡನೆ

9:47 PM, Tuesday, September 14th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

temple Demolishಮಂಗಳೂರು : ರಾಜ್ಯ ಹೆದ್ದಾರಿ-57ರಲ್ಲಿದ್ದ ಹರದನಹಳ್ಳಿ ಉಚ್ಚಗಣಿಯ ಮಹದೇವಮ್ಮ ದೇಗುಲವನ್ನು ಮೈಸೂರು ಜಿಲ್ಲಾಡಳಿತ ಧ್ವಂಸ ಮಾಡಿದ್ದು, ಪೊಲೀಸ್ ಬಂದೋಬಸ್ತ್ನಲ್ಲಿ ಜೆಸಿಬಿ ಮೂಲಕ ಪುರಾತನ ದೇಗುಲ ಕೆಡವಿರುವುರುದನ್ನು ಖಂಡಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಸಜ್ಜಾಗಿದೆ.

ಸರಕಾರ ರಾಜ್ಯದಾದ್ಯಂತ ರಸ್ತೆ ಅಗಲೀಕರಣಕ್ಕೆ ಪುರಾತನ ದೇವಸ್ಥಾನಗಳನ್ನು ತೆರವುಗೊಳಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ.

ಇದನ್ನು ಪ್ರಶ್ನಿಸಿರುವ ವಿಶ್ವ ಹಿಂದು ಪರಿಷತ್, ಬಜರಂಗದಳ ತಕ್ಷಣ ಸರಕಾರ ದೇವಸ್ಥಾನಗಳನ್ನು ತೆರವುಗೊಳಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಮತ್ತು ಒಡೆದು ಹಾಕಿರುವ ದೇವಸ್ಥಾನವನ್ನು ಪುನರ್ನಿರ್ಮಾಣ ಮಾಡಬೇಕು ಅಲ್ಲದೆ ಈ ಕೃತ್ಯವನ್ನು ಮಾಡಿರುವ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ನಂಜನಗೂಡು ತಾಲ್ಲೂಕಿನ ತಹಸಿಲ್ದಾರರನ್ನು ಅಮಾನತುಗೊಳಿಸಲು ಸರ್ಕಾರವನ್ನು ಒತ್ತಾಯಿಸಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕ್ ಮತ್ತು ಜಿಲ್ಲಾ ಕೇಂದ್ರಗಳಲ್ಲಿ 16 ನೇ ಸೆಪ್ಟೆಂಬರ್ ಗುರುವಾರ ವಿಶ್ವ ಹಿಂದು ಪರಿಷತ್, ಬಜರಂಗದಳ ಪ್ರತಿಭಟನೆ ನಡೆಸಲಿದೆ. ಅಂತೆಯೇ 16 ನೇ ಸೆಪ್ಟೆಂಬರ್ ಗುರುವಾರ ಬೆಳಿಗ್ಗೆ 11 ಗಂಟೆಗೆ ಕದ್ರಿ ಮಲ್ಲಿಕಟ್ಟೆ ದ್ವಾರದ ಬಳಿ ಪ್ರತಿಭಟನೆ ನಡೆಯಲಿದೆ ಎಂದು ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇವಲ ಹಿಂದೂ ಧರ್ಮದ ದೇವಸ್ಥಾನಗಳನ್ನು ಮಾತ್ರ ಟಾರ್ಗೆಟ್ ಮಾಡಿದರೆ ಸುಮ್ಮನಿರಲ್ಲ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English