ಉಡುಪಿ : ಯಾವುದೇ ಸಮುದಾಯ- ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ, ದೇವಸ್ಥಾನ, ಮಸೀದಿ, ಚರ್ಚುಗಳು ನಮ್ಮ ಶ್ರದ್ಧಾ ಕೇಂದ್ರಗಳಾಗಿವೆ ಅವುಗಳ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಉಡುಪಿಯಲ್ಲಿಂ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು ಅಕ್ರಮ ಸ್ಥಳದಲ್ಲಿ ಶೃದ್ಧಾ ಕೇಂದ್ರಗಳಿದ್ದರೆ ಪೂರ್ವ ಸೂಚನೆ ನೀಡಿ, ಸ್ಥಳೀಯ ಜನರ ಮನವೊಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡುವ ಬಗ್ಗೆ ಸರಕಾರ ಯೋಚಿಸಬೇಕು ಎಂದು ಅವರು ಮನವಿ ಮಾಡಿದರು.
ಜನರ ನಂಬಿಕೆ, ಭಕ್ತಿ ಭಾವನೆಗೆ ನೋವಾದಾಗ ಪ್ರತಿಭಟನೆ ನಡೆಸುತ್ತಾರೆ. ಅಕ್ರಮ ದೇವಾಲಯಗಳು ಕಂಡು ಬಂದರೆ ಊರಿನ ಜನರ ಮನವೊಲಿಸಿ ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯ ಸರಕಾರಕ್ಕೆ ನನ್ನ ಪ್ರಾರ್ಥನೆಯಾಗಿದೆ ಎಂದರು.
ಪ್ರಧಾನಿ ಮೋದಿ ಅವರು ಇಂದು 71ನೇ ವರ್ಷ ಆಚರಣೆ ಮಾಡುತ್ತಿದ್ದಾರೆ. ದೇಶದ ಬಡಜನರ ಸೇವೆ ಅವರಿಗೆ ಪ್ರಿಯವಾದದ್ದು ಈ ಹಿನ್ನೆಲೆಯಲ್ಲಿ ಬೇರೆ-ಬೇರೆ ರೀತಿಯ ಸೇವಾ ಚಟುವಟಿಕೆಯಲ್ಲಿ ಬಿಜೆಪಿ ತೊಡಗಿಸಿಕೊಂಡಿದೆ. ದೇಶದ ರಕ್ಷಣೆ ಮತ್ತು ಗೌರವ ಹೆಚ್ಚಿಸಲು ದೇವರು ಅವರಿಗೆ ಶಕ್ತಿ ನೀಡಲಿ. ಶ್ರೀಕೃಷ್ಣ- ಚಾಮುಂಡೇಶ್ವರಿ ದೇವರಲ್ಲಿ ನಾನು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದರು.
ಜಿಎಸ್‌ಟಿಗೆ ಪೆಟ್ರೋಲ್ ಉತ್ಪನ್ನ ತಂದರೆ ಪೆಟ್ರೋಲ್ ದರ ಇಳಿಕೆಯಾಗಬಹುದು ಎಂಬ ನಿರೀಕ್ಷೆ ಇದೆ. ಆ ನಿಟ್ಟಿನಲ್ಲಿ ಪ್ರಧಾನಿ ಮೋದಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.
Click this button or press Ctrl+G to toggle between Kannada and English