ಖಾಸಗಿ ಶಾಲೆಗಳಲ್ಲಿ 30% ಶುಲ್ಕ ಕಡಿತ ಮಾಡಬೇಕೆಂಬ ಸರಕಾರದ ಆದೇಶವನ್ನು ರದ್ದು ಪಡಿಸಿದ ಹೈಕೋರ್ಟ್ : ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದಿಂದ ಸ್ವಾಗತ

5:58 PM, Friday, September 17th, 2021
Share
1 Star2 Stars3 Stars4 Stars5 Stars
(No Ratings Yet)
Loading...

Ravindra Shettyಮಂಗಳೂರು  : ಸರಕಾರ ನಿಗದಿಮಾಡಿದ್ದ ಶೇ 30 ಶುಲ್ಕ ಕಡಿತವನ್ನು 15% ಕ್ಕೆ ಇಳಿಸಿದ ಹೈಕೋರ್ಟ್ ಆದೇಶವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟ ಸ್ವಾಗತ ಮಾಡಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದ್ದಾರೆ.

ನಮ್ಮಲ್ಲಿ ಹಲವಾರು ಖಾಸಗಿ ಶಾಲೆಗಳು ಪೋಷಕರಿಗೆ ಶಾಲಾ ಶುಲ್ಕದಲ್ಲಿ ಬಹಳಷ್ಟು ರಿಯಾಯಿತಿ ನೀಡಿವೆ, ಆದರೂ ಕೆಲವು ಪೋಷಕರು ಶುಲ್ಕವನ್ನೇ ಪಾವತಿಸದೆ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ಬಹಳಷ್ಟು ಸಂಕಷ್ಟಕ್ಕೆ ಎದುರಾಗಿತ್ತು, ಶಿಕ್ಷಕರ ವೇತನ ಇತರ ಆಡಳಿತಾತ್ಮಕ ವೆಚ್ಚಕ್ಕೂ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದವು, ನ್ಯಾಯಾಲಯದ ಈ ತೀರ್ಪುನಿಂದಾಗಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಆಡಳಿತ ಮಂಡಳಿ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ, ಸಮಾಜದಲ್ಲಿ ನೈತಿಕ ಗುಣಮಟ್ಟದ ಮೌಲ್ಯಧಾರಿತ ಶಿಕ್ಷಣ ನೀಡಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುವಲ್ಲಿ ಖಾಸಗಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳ ಕೊಡುಗೆ ಬಹಳಷ್ಟಿದೆ ಎಂಬುವುದನ್ನು ಯಾರು ಮರೆಯುವಂತಿಲ್ಲ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ತಿಳಿಸಿ, ಮಾನ್ಯ ಹೈಕೋರ್ಟ್ ನ ಆದೇಶವನ್ನು ಸ್ವಾಗತಿಸಿದ್ದಾರೆ.

ಈ ನಿಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ಮಾಡಿದ ಇತರ ಶಿಕ್ಷಣ ಸಂಸ್ಥೆಗಳ ಸಂಘಟನೆಗಳಿಗೆ ಅಭಿನಂದನೆಗಳು. ಅಲ್ಲದೆ ಸರಕಾರ, ಶಿಕ್ಷಣ ಇಲಾಖೆ ನೀಡಿದ ಕೋವಿಡ್ ಸುರಕ್ಷತಾ ನಿಯಮಗಳನ್ನು ಎಲ್ಲಾ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕೆಂದು ವಿನಂತಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English