ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಶುಕ್ರವಾರ ದೇಶಾದ್ಯಂತ ದಾಖಲೆಯ ಎರಡು ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇದು ದೇಶದ ಕೋವಿಡ್ ಲಸಿಕೆ ಅಭಿಯಾನದಲ್ಲಿ ಹೊಸ ಮೈಲುಗಲ್ಲು ಎನ್ನಲಾಗಿದೆ.
“ಪ್ರಧಾನಿ ಮೋದಿಯವರ ಜನ್ಮದಿನದಂದು ದೇಶಾದ್ಯಂತ ಎರಡು ಕೋಟಿ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಈ ಮುಂಚೆ ತಿಳಿಸಿದ್ದವು.
ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಉಡುಗೊರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು, ಭಾರತವು ಒಂದೇ ದಿನದಲ್ಲಿ ಎರಡು ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ’ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಕೋ-ವಿನ್ ಪೋರ್ಟಲ್‌ನ ಮಾಹಿತಿಯ ಪ್ರಕಾರ, ಶುಕ್ರವಾರ ಸಂಜೆ 7.40 ರ ವರೆಗೆ ದೇಶದಲ್ಲಿ 22,231,319 ಲಸಿಕೆ ವಿತರಣೆ ಮಾಡಲಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಲಸಿಕೆ ವಿತರಣೆ ಸಂಖ್ಯೆ 78.72 ಕೋಟಿ ಡೋಸ್ ತಲುಪಿದೆ.
Click this button or press Ctrl+G to toggle between Kannada and English