ಜಿಲ್ಲೆಯ ಆದಿವಾಸಿ ಜನಾಂಗದ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ.

4:03 PM, Tuesday, October 5th, 2010
Share
1 Star2 Stars3 Stars4 Stars5 Stars
(No Ratings Yet)
Loading...

ಆದಿವಾಸಿ ಜನಾಂಗದ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿಮಂಗಳೂರು: ಬುಡಕಟ್ಟು ಜನರ ಹಕ್ಕುಗಳ ರಾಷ್ಟ್ರೀಯ ವೇದಿಕೆಯ ವತಿಯಿಂದ ಬೆಳ್ತಂಗಡಿ ಮತ್ತು ಮಂಗಳೂರಿನಲ್ಲಿ, ನಿನ್ನೆ ಹಾಗೂ ಇಂದು ಪ್ರತಿಭಟನಾ ಸಭೆ ನಡೆಯಿತು.
ಇಂದು ಬೆಳಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಬುಡಕಟ್ಟು ಜನರ ವಿವಿಧ ಬೇಡಿಕೆಗಳು ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಯೋಜನೆಯ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಆದಿವಾಸಿಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಮತ್ತು ಆಕ್ರಮಣವನ್ನು ಕೂಡಲೇ ನಿಲ್ಲಿಸಬೇಕು ಎಂದು ಬುಡಕಟ್ಟು ಹಕ್ಕುಗಳ ರಾಷ್ಟ್ರೀಯ ವೇದಿಕೆಯ ಸದಸ್ಯ ಕೃಷ್ಣಪ್ಪ ಕೊಂಚಾಡಿ ಒತ್ತಾಯಿಸಿದರು.

ಆದಿವಾಸಿ ಜನಾಂಗದ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ
ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಜನರ ಸಾಗುವಳಿ ಮಾಡುವ ಮತ್ತು ವಾಸದ ಭೂಮಿಯನ್ನು ಸಕ್ರಮಗೊಳಿಸಬೇಕು ಎಂದು ಅವರು ಹೇಳಿದರು.
ಅರಣ್ಯ ಇಲಾಖೆ ಮತ್ತು ಲ್ಯಾಂಡ್ ಮಾಫಿಯಾಗಳು ಬುಡಕಟ್ಟು ಜನರ ಉಳಿಯುವಿಕೆಯನ್ನು ನಾಶಮಾಡುತ್ತಿದ್ದಾರೆ, ಅವರು ವಾಸಮಾಡುವ ಅರಣ್ಯ ಪ್ರದೇಶಗಳಲ್ಲಿ ಅವರಿಗೆ ನಾನಾ ಬಗೆಯ ಹಿಂಸೆ ನೀಡುತ್ತಿದ್ದಾರೆ. ಇದನ್ನು ತಡೆಗಟ್ಟಬೇಕು ಎಂದು ಸಿ.ಪಿ.ಐ.ಯಂ ನ ಕಾರ್ಯದರ್ಶಿ ಮಂಡಳಿ ಸದಸ್ಯ ವಸಂತ ಆಚಾರಿ ಹೇಳಿದರು.
ಪ್ರತಿಭಟನಾ ಸಭೆಯಲ್ಲಿ ಮುನೀರ್ ಕಾಟಿಪಳ್ಳ, ಸುನಿಲ್ ಕುಮಾರ್ ಬಜಾಲ್, ಬಿ.ಮಾದವ, ವಸಂತ ಆಚಾರ್ಯ, ಸುಕುಮಾರ್ ಮೊದಲಾದವರು ಭಾಗವಹಿಸಿದ್ದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಆದಿವಾಸಿ ಜನಾಂಗದ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English