ಮಂಗಳೂರು : ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶಕ್ಕೆ ನಗರದ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೆ.23ರ ಗುರುವಾರ ಚಾಲನೆ ನೀಡಿದರು.
ಬೆಂಗಳೂರು ವಿ.ಟಿ.ಪಿ.ಸಿ ಯ ವ್ಯವಸ್ಥಾಪಕ ನಿರ್ದೇಶಕ ಸತೀಶ್.ಎಸ್.ಆರ್ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ಸೀಮಾ ಸುಂಕದ ಆಯುಕ್ತ ಇಮಾಮುದ್ದೀನ್ ಅಹಮ್ಮದ್, ಎಂ.ಆರ್.ಪಿಲ್.ಎಲ್‍ನ ಗ್ರೂಪ್ ಜನರಲ್ ವಿಭಾಗದ ಯೋಗೀಶ್ ನಾಯಕ್, ಲೀಡ್ ಬ್ಯಾಂಕ್‍ನ ಜನರಲ್ ಮ್ಯಾನೇಜರ್ ಬಿ.ಯೋಗೀಶ್ ಆಚಾರ್ಯ ವೇದಿಕೆಯಲ್ಲಿದ್ದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ ದಾಸ್ ಸ್ವಾಗತಿಸಿದರು. ಉದ್ಯಮಿಗಳು ಭಾಗವಹಿಸಿದ್ದರು.
Click this button or press Ctrl+G to toggle between Kannada and English