ಚಿಕ್ಕಮಗಳೂರು : ದತ್ತಪೀಠದಲ್ಲಿ ಪೂಜೆಗೆ ಮೌಲ್ವಿ ನೇಮಕ ಮಾಡಿದ್ದ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ಪೂಜಾ ವಿಧಾನದ ಕುರಿತು ಹೊಸದಾಗಿ ತೀರ್ಮಾನ ತೆಗೆದುಕೊಳ್ಳುವಂತೆ ನೀಡಿರುವ ಆದೇಶವನ್ನು ರಾಜ್ಯ ಬಿಜೆಪಿ ಮುಖಂಡರು ಸ್ವಾಗತಿಸಿದ್ದಾರೆ.
ದತ್ತ ಪೀಠದ ವಿಚಾರದಲ್ಲಿ ಹಿಂದೂಗಳ ಹೋರಾಟಕ್ಕೆ ಜಯ ಸಿಕ್ಕಿದೆ. ದತ್ತ ಮಾಲಾಧಾರಿಗಳು ಮತ್ತು ದತ್ತ ಪೀಠದ ಮೇಲೆ ನಂಬಿಕೆ ಇರಿಸಿರುವ ಅಸಂಖ್ಯಾತ ಭಕ್ತರಿಗೆ ಶುಭ ವಿಚಾರ ಬಂದಿದೆ. ಹೈಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆ. ಯಾವತ್ತೂ ಸತ್ಯಕ್ಕೆ ಜಯ ಖಚಿತ ಎಂಬುದು ಇದರಿಂದ ಋಜುವಾತಾಗಿದೆ. ಮೌಲ್ವಿ ನೇಮಕ ಆದೇಶ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಮೌಲ್ವಿ ನೇಮಿಸುವ ಕುರಿತ ಧಾರ್ಮಿಕ ದತ್ತಿ ಇಲಾಖೆಯ ಆದೇಶವನ್ನು ರದ್ದು ಮಾಡಿರುವ ಹೈಕೋರ್ಟ್ ತೀರ್ಪಿನಿಂದ ಹಿಂದೂಗಳಿಗೆ ಸಂತೋಷವಾಗಿದೆ. ಇದರಿಂದ ನ್ಯಾಯಾಂಗದ ಮೇಲಿನ ಭರವಸೆಯೂ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ದತ್ತ ಪೀಠದ ಕುರಿತ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ದತ್ತ ಪೀಠದ ಪೂಜೆಗೆ ಹಿಂದು ಅರ್ಚಕರ ನೇಮಕವನ್ನು ಎತ್ತಿಹಿಡಿದಿದೆ ಹೈಕೋರ್ಟ್. ದಶಕಗಳಿಂದ ಹೋರಾಟ ನಡೆಸಿಕೊಂಡು ಬಂದ ಭಕ್ತಾದಿ/ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಸಂಸದ ಬಿವೈ ರಾಘವೇಂದ್ರ ಟ್ವೀಟ್ ಮಾಡಿದ್ದಾರೆ.
ಚಿಕ್ಕಮಗಳೂರಿನ ಪವಿತ್ರ ದತ್ತಪೀಠ ಹೋರಾಟಕ್ಕೆ ಹಿಂದೂಗಳಿಗೆ ಮೊದಲ ಗೆಲುವು ಸಿಕ್ಕಿದೆ. ಪುರಾತನ ದತ್ತಪೀಠಕ್ಕೆ ಹಿಂದಿನ ಸರ್ಕಾರ ನೇಮಿಸಿದ್ದ ಮೌಲ್ವಿ ನೇಮಕವನ್ನು ರದ್ದುಗೊಳಿಸುವಂತೆ ರಾಜ್ಯ ಹೈಕೋರ್ಟ್ ಆದೇಶಿಸಿದೆ. ಹಿಂದೂಗಳ ಭಾವನೆಗೆ ಬೆಲೆ ಕೊಟ್ಟ ನ್ಯಾಯಾಲಯಕ್ಕೆ ಧನ್ಯವಾದಗಳು. ದತ್ತಪೀಠ ನಮ್ಮದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ದತ್ತ ಭಕ್ತರ ದಶಕಗಳ ಹೋರಾಟಕ್ಕೆ ಹೈಕೋರ್ಟಿನಲ್ಲಿ ಜಯ. ದತ್ತಪೀಠ ಪೂಜೆಗೆ ಮೌಲ್ವಿ ನೇಮಕ ರದ್ದು ಮಾಡಿದ ಹೈಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇನೆ. ಸತ್ಯಮೇವ ಜಯತೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ದತ್ತ ಪೀಠದ ವಿಚಾರದಲ್ಲಿ ಹಿಂದೂಗಳ ಹೋರಾಟಕ್ಕೆ ಜಯ ಸಿಕ್ಕಿದೆ. ದತ್ತ ಪೀಠದ ಮೇಲೆ ನಂಬಿಕೆ ಇರಿಸಿರುವ ಅಸಂಖ್ಯಾತ ಭಕ್ತರಿಗೆ ಶುಭ ವಿಚಾರ ಬಂದಿದೆ. ದತ್ತಪೀಠ ಪೂಜೆಗೆ ಮೌಲ್ವಿ ನೇಮಕ ರದ್ದು ಮಾಡಿದ ಹೈಕೋರ್ಟಿನ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಹಿಂದೂಗಳಿಗೆ ಭಾರಿ ದೊಡ್ಡ ಗೆಲುವು. ದತ್ತ ಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಿಸುವಂತೆ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿಯ ಪಕ್ಷಪಾತಿ ವರದಿಯನ್ನು ತಿರಸ್ಕರಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ನಾನು ಸ್ವಾಗತಿಸುತ್ತೇನೆ ಎಂದು ಸಿಟಿ ರವಿ ಟ್ವೀಟ್ ಮಾಡಿದ್ದಾರೆ.
2018ರಲ್ಲಿ ಕಾಂಗ್ರೆಸ್ ಸರಕಾರ ದತ್ತಪೀಠದಲ್ಲಿ ಮುಜಾವರ್ ನೇಮಕಮಾಡಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದ ಹೈಕೋರ್ಟ್ ತೀರ್ಪನ್ನು ಸ್ವಾಗತ – ವಿಶ್ವಹಿಂದು ಪರಿಷತ್
ತಕ್ಷಣ ರಾಜ್ಯಸರ್ಕಾರ ಹಿಂದು ಆರ್ಚಕರ ನೇಮಕ, ತ್ರಿಕಾಲ ಪೂಜೆಗೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಬೇಕೆಂದು ವಿಶ್ವಹಿಂದು ಪರಿಷತ್ ಆಗ್ರಹ ಎಂದು ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ತಿಳಿಸಿದ್ದಾರೆ.
Click this button or press Ctrl+G to toggle between Kannada and English