- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಸಿ ಮುಸ್ಲಿಮೇತರ ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ನಿಲ್ಲಿಸದಿದ್ದರೆ ಬೃಹತ್ ಪ್ರತಿಭಟನೆ : ಶ್ರೀರಾಮ ಸೇನೆ

Sri-Rama-Sene [1]ಮಂಗಳೂರು : ಸುಪ್ರೀಂ ಕೋರ್ಟ್ ಆದೇಶ ಇದೆ ಎಂದು ರಾಜ್ಯ ಸರಕಾರ ಹಿಂದೂಗಳ ದೇವಸ್ಥಾನ ಉರುಳಿಸಿದೆ. ಅದೇ ಸರಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ಇದ್ದರೂ ಮುಸ್ಲಿಮರು ಮಸೀದಿಗಳಲ್ಲಿ ಐದು ಹೊತ್ತು ಕೂಗುವ ಬಾಂಗ್ ನಿಲ್ಲಿಸಲು ಧೈರ್ಯ ಇಲ್ಲ ಎಂದು ಶ್ರೀರಾಮ ಸೇನೆ ರಾಜ್ಯ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್ ಹೇಳಿದ್ದಾರೆ.

ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಧಾರ್ಮಿಕ ಆಚರಣೆ ಎಂದು ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಸಿ ಮುಸ್ಲಿಮೇತರ ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ಕೂಡಲೇ ನಿಲ್ಲಿಸಬೇಕು ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ಮಾಡಿ ಸರಕಾರವನ್ನು ಎಚ್ಚರಿಸಲಾಗುವುದು ಎಂದು ಆನಂದ ಶೆಟ್ಟಿ ಅಡ್ಯಾರ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ 21 ವರ್ಷಗಳ ಹಿಂದೆಯೇ ಮಸೀದಿಗಳು ಮಾಡುವ ಶಬ್ದ ಮಾಲಿನ್ಯವನ್ನು ನಿಷೇಧಿಸುವ ಆದೇಶವನ್ನು ಹೊರಡಿಸಿತ್ತು. ಅಂದಿನ ರಾಜ್ಯ ಸರ್ಕಾರವು ಅದರ ಬಗ್ಗೆ ಕಾಳಜಿ ವಹಿಸದೆ ಕೋರ್ಟ್ ಆದೇಶವನ್ನು ಉಲ್ಲಂಘಿಸುತ್ತಾ ಬಂದಿದೆ. ಸುಪ್ರೀಂ ಕೋರ್ಟ್ ಮತ್ತೆ ಆದೇಶ ವನ್ನು ಜಾರಿಗೊಳಿಸಿದರು ಸರಕಾರ ಮುಸ್ಲಿಮರ ಓಲೈಕೆಗಾಗಿ ಸುಮ್ಮನಿದೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ, ಮಸೀದಿಗಳಲ್ಲಿ ಧ್ವನಿವರ್ಧಕಗಳು ಮತ್ತು ಮೈಕ್‌ಗಳನ್ನು ದಿನವಿಡೀ ಬಳಸಲಾಗುತ್ತದೆ ಮತ್ತು ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಚಾರದಲ್ಲಿ ಶ್ರೀರಾಮ ಸೇನೆ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಅವರು ಎಚ್ಚರಿಸಿದರು.