- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನೂತನ ಆಕ್ಸಿಜನ್ ಉತ್ಪಾದನಾ ಘಟಕ ಉದ್ಘಾಟನೆ

Putturu-Oxygen-Plant [1]ಪುತ್ತೂರು:  ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಆಕ್ಸಿಜನ್ ಉತ್ಪಾದನಾ ಘಟಕವನ್ನು ಸಚಿವ ಎಸ್.ಅಂಗಾರ ಬುಧವಾರ ಉದ್ಘಾಟನೆಗೊಳಿಸಿದರು.

ಕ್ಯಾಂಪ್ಕೋ ಮತ್ತು ಜಿಲ್ಲಾಡಳಿತದ ಸಹಯೋಗದೊಂದಿಗೆ ಸುಮಾರು ಒಂದು ಕೋಟಿ ವೆಚ್ಚದಲ್ಲಿ  ಆಕ್ಸಿಜನ್ ಘಟಕ ಸಿದ್ಧಗೊಂಡಿದೆ.  ಕಾಂಪ್ಕೋ ಸಂಸ್ಥೆ 78 ಲಕ್ಷರೂ ವೆಚ್ಚ ಭರಿಸಿದೆ.

ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಆನ್‌ಲೈನ್ ಮೂಲಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೋವಿಡ್ ಪ್ರಥಮ ಮತ್ತು ಎರಡನೇ ಅಲೆಯಲ್ಲಿ ಆಮ್ಲಜಕದ ಬೇಡಿಕೆಯನ್ನು ಗಮನಿಸಿ ಆಮ್ಲಜನಕದ ಬೇಡಿಕೆಗೆ ಶಾಶ್ವತ ಪರಿಹಾರಕ್ಕಾಗಿ ನಮ್ಮ ಸರಕಾರ ನಿರಂತರ ಶ್ರಮ ವಹಿಸಿದೆ. ಅದರ ಫಲವಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲೂ ಆಮ್ಲಜನಕ ಘಟಕ ಉದ್ಘಾಟನೆಗೊಂಡಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ವಹಿಸಿದ್ದರು.

ಸಂಸದ ನಳಿನ್ ಕುಮಾರ್ ಕಟೀಲ್, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ನಿರ್ದೇಶಕ ಕೃಷ್ಣಕುಮಾರ್, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್‌ ಬಾಬು, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್, ತಾಲೂಕು ವೈದ್ಯಾಧಿಕಾರಿ ದೀಪಕ್ ರೈ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ವಿದ್ಯಾ ಗೌರಿ, ರಪಿಕ್, ಡಾ.ಪ್ರಸನ್ನ, ರಾಜೇಶ್ ಬನ್ನೂರು, ಕೃಷ್ಣ ನಾಯ್ಕ್, ಸಹಾಯಕ ಆಡಳಿತಾಧಿಕಾರಿ ಯೋಗಾನಂದ, ಡಾ.ಜಯದೀಪ್, ಡಾ.ಜಯಕುಮಾರಿ, ಮಂಜಣ್ಣ ಗೌಡ, ಅತಿಥಿಗಳನ್ನು ಗೌರವಿಸಿದರು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಸ್ವಾಗತಿಸಿದರು.