ಬಂಟ್ವಾಳ : ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿ ಅಮ್ಟಾಡಿ ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಅಪ್ರಾಪ್ತೆಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಮಾಡಿರುವುದಾಗಿ ಬಾಲಕಿಯೇ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ಅಲ್ಲದೆ ಐವರು ಕಾಮುಕರ ಹೆಸರನ್ನು ಕೂಡ ತಿಳಿಸಿದ್ದಾಳೆ.
ಕಾಮುಕರು ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ರೂಂ ಒಂದಕ್ಕೆ ಕರೆದೊಯ್ದಿದ್ದಾರೆ. ನಂತರ ಅಲ್ಲಿ ಬಾಲಕಿಗೆ ಮತ್ತು ಬರಿಸುವ ಜ್ಯೂಸ್ ನೀಡಿ ಅತ್ಯಾಚಾರ ಮಾಡಿದ್ದಾರೆ. ಸದ್ಯ ಬಾಲಕಿಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬಾಲಕಿಯ ವೈದ್ಯಕೀಯ ಪರೀಕ್ಷೆಯ ವರದಿ ಬಂದ ಬಳಿಕ ಕೃತ್ಯದ ಬಗ್ಗೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ. ಪ್ರಕರಣದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದು, ಕಾಮುಕರ ಪತ್ತೆಗೆ 2 ತಂಡಗಳನ್ನು ರಚಿಸಲಾಗಿದೆ.
ಆರೋಪಿಗಳು ಬಳಿಕ ಆಕೆಯನ್ನು ಬ್ರಹ್ಮರಕೂಟ್ಲು ಬಳಿ ಬಿಟ್ಟು ಹೋಗಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ ಎನ್ನಲಾಗಿದೆ.
Click this button or press Ctrl+G to toggle between Kannada and English