ಬಂಟ್ವಾಳ : ಲಲಿತಾಪಂಚಮಿಯ ದಿನದಂದು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ಭಕ್ತಾದಿಗಳಿಗೆ ಅಮ್ಮನವರಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಪ್ರಸಾದ ರೂಪದಲ್ಲಿ ವಿತರಿಸಲು ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ಉಳಿಪ್ಪಾಡಿಗುತ್ತು ರಾಜೇಶ್ ನಾಯ್ಕ್, ಆಡಳಿತ ಮೋಕ್ತೇಸರರಾದ ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು,ಚೇರಾ ಸೂರ್ಯನಾರಾಯಣ ರಾವ್,ಪವಿತ್ರಪಾಣಿ ಮಾಧವ ಭಟ್,ಮಾಜಿ ಸಚಿವರಾದ ಬಿ.ನಾಗರಾಜ ಶೆಟ್ಟಿ ಪ್ರಮುಖರು ಉಪಸ್ಥಿತರಿದ್ದರು.ಊರ ಪರವೂರ ಭಕ್ತಾದಿಗಳು ಈ ಸಂದರ್ಭದಲ್ಲಿ ಸೀರೆ ಪ್ರಸಾದ ಸ್ವೀಕರಿಸಿದರು.
Click this button or press Ctrl+G to toggle between Kannada and English