ಮಂಗಳೂರು : ನಗರದ ಕುದ್ರೋಳಿಯ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಅ.13ರ ಬುಧವಾರ ಸಂಜೆ ಆಗಮಿಸುತ್ತಿದ್ದಾರೆ.
ಭದ್ರತೆ ಹಾಗೂ ವಿಶೇಷ ತಯಾರಿಗಳನ್ನು ಕೈಗೊಳ್ಳಬೇಕಾದ ಹಿನ್ನಲೆಯಲ್ಲಿ ಅ.13ರ ಮಧ್ಯಾಹ್ನ 3 ರಿಂದ ಸಂಜೆ 7 ಗಂಟೆಯವರೆಗೆ ಆಗಮಿಸುವ ಭಕ್ತಾಧಿಗಳಿಗೆ ಅನಾನುಕೂಲವಾಗಲಿದೆ.
ರಾತ್ರಿ 7 ರಿಂದ ಎಂದಿನಂತೆ ದರುಶನಕ್ಕೆ ಅವಕಾಶವಿದೆ.
ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ನಾಗರೀಕರು ಸಹಕರಿಸುವಂತೆ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
Click this button or press Ctrl+G to toggle between Kannada and English