ಪೊಲೀಸರಿಗೆ ದೂರು ನೀಡಿದಕ್ಕೆ ಗ್ಯಾಸ್ ರಿಪೇರಿ ಅಂಗಡಿ ಮಾಲೀಕನನ್ನು ಚೂರಿಯಿಂದ ಇರಿದ ವ್ಯಕ್ತಿ

10:12 PM, Tuesday, October 19th, 2021
Share
1 Star2 Stars3 Stars4 Stars5 Stars
(No Ratings Yet)
Loading...

Harish Ganigaಉಳ್ಳಾಲ: ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಕೋಪದಲ್ಲಿ ವ್ಯಕ್ತಿಯೊಬ್ಬ ಚೂರಿಯಿಂದ ಇರಿದ ಘಟನೆ ಉಳ್ಳಾಲದಲ್ಲಿ ಮಂಗಳವಾರ ನಡೆದಿದೆ.

ಚೂರಿ ಇರಿತಕ್ಕೊಳಗಾದವರನ್ನು ಕರಾಟೆ ಶಿಕ್ಷಕ ಉಳಿಯ ನಿವಾಸಿ ಗ್ಯಾಸ್ ರಿಪೇರಿ ಅಂಗಡಿ ಮಾಲೀಕ ಹರೀಶ್ ಗಾಣಿಗ (42) ಎಂದು ಗುರುತಿಸಲಾಗಿದೆ.

ಉಳಿಯ ನಿವಾಸಿ ವಿಶಾಲ್ ಚೂರಿಯಿಂದ ಇರಿದ ಆರೋಪಿ ಎಂದು ತಿಳಿದುಬಂದಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಕೆಲವು ದಿನಗಳ ಹಿಂದೆ ಹರೀಶ್ ಗಾಣಿಗ ಅವರ ಜೊತೆ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ವಿಶಾಲ್ ಗಲಾಟೆ ಮಾಡಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಹರೀಶ್ ಅವರು ವಿಶಾಲ್ ವಿರುದ್ಧ ಠಾಣೆಗೆ ದೂರು ನೀಡಿದ್ದರು.

ಈ ಕಾರಣದಿಂದ ಕೋಪಗೊಂಡ ವಿಶಾಲ್ ಹರೀಶ್ ಅವರ ಅಂಗಡಿ ಬಳಿ ತೆರಳಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ವೇಳೆ ಚೂರಿಯಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಹರೀಶ್ ಗಾಣಿಗ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English