ದಕ್ಷಿಣ ಕನ್ನಡ ಜಿಲ್ಲೆಯ ಕಂಬಳ ವೇಳಾಪಟ್ಟಿ ಪ್ರಕಟ

11:01 PM, Wednesday, October 20th, 2021
Share
1 Star2 Stars3 Stars4 Stars5 Stars
(No Ratings Yet)
Loading...

kambalaಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಕಂಬಳ ಸಿದ್ಧತೆ ನಡೆದಿದ್ದು ಜಿಲ್ಲಾ ಕಂಬಳ ಸಮಿತಿಯು 2021-22ನೇ ಸಾಲಿನ ಕಂಬಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ನ.27ರಿಂದ 2020ರ ಮಾರ್ಚ್ 26ರ ವರೆಗೆ ಒಟ್ಟು 17 ಕಂಬಳ ಕೂಟಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಮೊದಲ ಕಂಬಳ ಮೂಡುಬಿದಿರೆಯಲ್ಲಿ ಹಾಗೂ ಕೊನೆಯ ಕಂಬಳ ವೇಣೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ವೇಳಾಪಟ್ಟಿ ಪ್ರಕಟಗೊಂಡಿದ್ದರೂ, ಕೆಲವು ಕಂಬಳಗಳ ದಿನಾಂಕಗಳು ಬದಲಾಗುವ ಸಾಧ್ಯತೆಗಳಿವೆ ಎಂದು ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ.

ಸಮಿತಿ ಸದಸ್ಯರೊಂದಿಗೆ ಚರ್ಚಿಸಿ ಈ ಬಾರಿ ಕಂಬಳ ಆಯೋಜಿಸುವ ನಿಟ್ಟಿನಲ್ಲಿ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಒಟ್ಟು 17 ಕಂಬಳ ಕೂಟ ಆಯೋಜನೆಗೊಳ್ಳಲಿದ್ದು, ಅನಿರೀಕ್ಷಿತ ಬದಲಾವಣೆ ಹೊರತುಪಡಿಸಿ ಇದೇ ಅಂತಿಮ ಎನ್ನಬಹುದು.

ಕಂಬಳ ವೇಳಾಪಟ್ಟಿ:
ನ.27 ಮೂಡುಬಿದಿರೆ, ಡಿ.11 ಹೊಕ್ಕಾಡಿ, ಡಿ.18 ಮಂಗಳೂರು, ಡಿ.26 ಮೂಲ್ಕಿ, ಜ.1 ಕಕ್ಕೆಪದವು, ಜ.8 ಅಡ್ವೆ ನಂದಿಕೂರು, ಜ.16 ಮಿಯ್ಯರು, ಜ.22 ಪುತ್ತೂರು, ಜ.29 ಐಕಳ, ಫೆ.5 ಬಾರಾಡಿ, ಫೆ.12 ಜೆಪ್ಪು, ಫೆ.19 ವಾಮಂಜೂರು, ಫೆ.26 ಪೈವಳಿಕೆ, ಮಾ.5 ಕಟಪಾಡಿ, ಮಾ.12 ಉಪ್ಪಿನಂಗಡಿ, ಮಾ.19 ಬಂಗಾಡಿ, ಮಾ.26 ವೇಣೂರಿನಲ್ಲಿ ನಡೆಯಲಿದೆ.

ಪಿಲಿಕುಳ ಕಂಬಳ ಇನ್ನೂ ನಿಗದಿಗೊಂಡಿಲ್ಲ. ಡಿಸೆಂಬರ್‌ನಲ್ಲಿ ಆಯೋಜನೆಗೊಳ್ಳಬಹುದು ಎಂಬ ನಿರೀಕ್ಷೆಗಳಿವೆ. ತಲಪಾಡಿ ಸೂರ್ಯಚಂದ್ರ ಜೋಡುಕರೆ ಕಂಬಳ ಜಮೀನು ತಕರಾರಿನಿಂದಾಗಿ ಇಲ್ಲಿ ಈ ವರ್ಷವೂ ಕಂಬಳ ನಡೆಯುತ್ತಿಲ್ಲ. ಕಾಸರಗೋಡಿನ ಪೈವಳಿಕೆ ಕಂಬಳಕ್ಕೆ ದಿನಾಂಕ ನಿಗದಿಯಾಗಿದ್ದರೂ, ಕೇರಳದ ಕೋವಿಡ್-19 ಸ್ಥಿತಿಗತಿಯನ್ನು ಅವಲಂಬಿಸಿದೆ.

ಮೂಡುಬಿದಿರೆ ಅಥವಾ ಮಿಯ್ಯರು ಕಂಬಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರೆಸುವ ಪ್ರಯತ್ನ ನಡೆಯುತ್ತಿದೆ. ಹಿಂದೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಹಿನ್ನೆಲೆಯಲ್ಲಿ ಪ್ರಸಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿರುವ ಸುನೀಲ್ ಕುಮಾರ್ ಅವರು ಮಿಯ್ಯರು ಕಂಬಳಕ್ಕೆ ಸಿಎಂರನ್ನು ಆಹ್ವಾನಿಸಲು ಉತ್ಸುಕರಾಗಿದ್ದಾರೆ.

ಮಂಗಳೂರು ತಾಲೂಕಿನ ಬೋಳಿಯಾರು ಮತ್ತು ಮೂಡುಬಿದಿರೆ ತಾಲೂಕಿನ ಪಣಪಿಲ ಎಂಬಲ್ಲಿ ಮುಂದಿನ  ವರ್ಷ (2022-23) ಅಧಿಕೃತವಾಗಿ ಜೋಡುಕರೆ ಕಂಬಳಗಳು ನಡೆಯುವ ಸಾಧ್ಯತೆ ಇದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English