ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.ಗಳ ಅನುದಾನ- ಸಿ.ಎಂ

9:10 PM, Saturday, October 23rd, 2021
Share
1 Star2 Stars3 Stars4 Stars5 Stars
(No Ratings Yet)
Loading...

Kitturu Chennammaಹುಬ್ಬಳ್ಳಿ : ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಇಂದು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮನ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡುತ್ತಿದ್ದರು.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು 2011 ರಲ್ಲಿ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಪ್ರಾರಂಭಿಸಲಾಯಿತು. ಕಿತ್ತೂರು ಚನ್ನಮ್ಮ ಪ್ರತಿಮೆಯನ್ನು ಬೆಳಗಾವಿಯ ನಗರದ ಕೇಂದ್ರ ಭಾಗದಲ್ಲಿ ಸ್ಥಾಪಿಸುವಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪಾತ್ರವನ್ನು ಸ್ಮರಿಸಿದರು.

ಕಿತ್ತೂರು ರಾಣಿ ಚೆನ್ನಮ್ಮ ನಾಡು ಕಂಡ ದಿಟ್ಟ ಧೀಮಂತ, ಶ್ರೇಷ್ಠ ಸ್ವತಂತ್ರ ಹೋರಾಟಗಾರರಲ್ಲಿ ಒಬ್ಬರು. ಚನ್ನಮ್ಮ ಬ್ರಿಟಿಷರ ವಿರುದ್ಧ ರಣಕಹಳೆ ಊದಿದ ಕರ್ನಾಟಕದ ಹೆಮ್ಮೆಯ ಮಹಿಳೆ ಎಂದು ಮುಖ್ಯಮಂತ್ರಿಗಳು ಹೇಳಿದರು.

Kitturu Chennamma ಕಿತ್ತೂರು ರಾಣಿ ಚೆನ್ನಮ್ಮ ಬೆಳಗಾವಿಗೆ ಮಾತ್ರ ಸೀಮಿತವಾಗಿರದೆ ಇಡೀ ರಾಜ್ಯಕ್ಕೆ ಸೇರಿದವರಾಗಿದ್ದಾರೆ. ಅವರ ಜ್ಯೋತಿಯನ್ನು ಬೆಂಗಳೂರಿನವರೆಗೆ ಕೊಂಡೊಯ್ಯಲಾಗಿದೆ. ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ನವರ ಕೊಡುಗೆಯನ್ನು ಸ್ಮರಿಸಿ , ಅವರ ಆಶೋತ್ತರಗಳನ್ನು ಈಡೇರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.

ಸಚಿವರಾದ ಮುರುಗೇಶ್ ನಿರಾಣಿ, ಶಂಕರ ಪಾಟೀಲ ಮುನೇನಕೊಪ್ಪ ಶಾಸಕ ರಾಜೂಗೌಡ ಮತ್ತು ಇತರರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English