ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭಗೊಂಡ 1ರಿಂದ 5ನೇ ತರಗತಿ ಪ್ರಾಥಮಿಕ ತರಗತಿಗಳು

12:12 PM, Monday, October 25th, 2021
Share
1 Star2 Stars3 Stars4 Stars5 Stars
(No Ratings Yet)
Loading...

School Reopenಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ಒಂದೂವರೆ ವರ್ಷ ಮುಚ್ಚಿದ್ದ ಶಾಲೆಗಳು ಮತ್ತೆ ಆರಂಭಗೊಂಡಿದೆ.  1ರಿಂದ 5ನೇ ತರಗತಿ ಮಕ್ಕಳು ಮತ್ತೆ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಸೋಮವಾರ ಕಿರಿಯ ಪ್ರಾಥಮಿಕ ಶಾಲೆಗಳು ಪುನಾರಂಭ ಗೊಂಡಿದೆ.

ಜಿಲ್ಲೆಯಲ್ಲಿ 1ರಿಂದ 5ನೇ ತರಗತಿ‌ ವರೆಗಿನ 1,57,563 ಮಕ್ಕಳಿದ್ದು, ಮೊದಲ ದಿನ ಶಾಲೆಗೆ ಆಗಮಿಸಿದ್ದಾರೆ. ಹಾಜರಾತಿ ಕಡ್ಡಾಯ ಇಲ್ಲದಿದ್ದರೂ ಮಕ್ಕಳು ಉತ್ಸುಕರಾಗಿಯೇ ತರಗತಿಗಳಿಗೆ ಹಾಜರಾದರು.

ಶನಿವಾರವೇ ಶಾಲಾ ಕೊಠಡಿಗಳು ಆವರಣವನ್ನು ಸ್ಯಾನಿಟೈಸ್ ಮಾಡಿ ಇಡಲಾಗಿತ್ತು. ಸೋಮವಾರ ಮುಂಜಾನೆ ಎಂದಿಗಿಂತ ಬೇಗ ಆಗಮಿಸಿದ ಶಿಕ್ಷಕರು ಶಾಲೆಯ ಪ್ರವೇಶ ದ್ವಾರ ಸೇರಿದಂತೆ ಕೊಠಡಿಗಳನ್ನು ಅಲಂಕರಿಸಿ, ಮಕ್ಕಳ ಸ್ವಾಗತಕ್ಕೆ ವ್ಯವಸ್ಥೆ ಮಾಡಿದರು. ಹಲವು ತಿಂಗಳ ಬಳಿಕ ಮಕ್ಕಳನ್ನು ನೇರವಾಗಿ ನೋಡುತ್ತಿರುವುದರಿಂದ ಶಿಕ್ಷಕರೂ ಉತ್ಸುಕರಾಗಿದ್ದುದು ಕಂಡು ಬಂತು. ಕೆಲವು ಶಾಲೆಗಳಲ್ಲಿ ಸಿಹಿತಿಂಡಿ, ಚಾಕ್ಲೆಟ್ ನೀಡಿ ಮಕ್ಕಳನ್ನು ಸ್ವಾಗತಿಸಿದರು. ಹೆತ್ತವರು ಮಕ್ಕಳನ್ನು ಶಾಲೆಗೆ ಬಿಟ್ಟು ತೆರಳಿದ್ದಾರೆ. ದಿನಬಿಟ್ಟು ದಿನ ವಾರದಲ್ಲಿ ಮೂರು ದಿನ ಮಧ್ಯಾಹ್ನದ ವರೆಗೆ ತರಗತಿಗಳು ನಡೆಯಲಿವೆ.‌ ನವೆಂಬರ್‌ 2ರಿಂದ ಇಡೀ ದಿನ‌ ತರಗತಿ ಇರಲಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English