ತಣ್ಣೀರುಬಾವಿ ತೀರದಲ್ಲಿ ಸಂಭ್ರಮದ ಲಕ್ಷ ಕಂಠಗಳ ಗೀತ ಗಾಯನ

12:03 AM, Friday, October 29th, 2021
Share
1 Star2 Stars3 Stars4 Stars5 Stars
(No Ratings Yet)
Loading...

Geetha Gayana ಮಂಗಳೂರು : ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಕನ್ನಡ ಭಾಷೆಯ ಮಹತ್ವ ಸಾರುವ ಲಕ್ಷ ಕಂಠಗಳ ಸಮೂಹ ಗೀತ ಗಾಯನವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗೀತಗಾಯನ ಕಾರ್ಯಕ್ರಮವನ್ನು ಡೊಂಗರಕೇರಿಯ ಕೆನರಾ ಪ್ರೌಢಶಾಲೆ, ಕೊಡಿಯಾಲ್ ಬೈಲ್‍ನ ಶಾರದ ವಿದ್ಯಾಲಯ, ಸುರತ್ಕಲ್‍ನ ಗೋವಿಂದ ದಾಸ್ ಪಿಯು ಕಾಲೇಜು, ರಥಬೀದಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಸೆಂಟ್ ಹಾಗೂ ಬಲ್ಮಠ ಮಹಿಳಾ ಕಾಲೇಜಿನ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸುಶ್ರಾವ್ಯವಾಗಿ ಪ್ರಸ್ತುತಪಡಿಸಿದರು.

ರಾಷ್ಟ್ರಕವಿ ಕುವೆಂಪು ವಿರಚಿತ “ಬಾರಿಸು ಕನ್ನಡ ಡಿಂಡಿಮ’’, ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತೆಗಳನ್ನು ಹಾಡಿ ಕನ್ನಡ ನಾಡು-ನುಡಿಯ ಪ್ರೇಮವನ್ನು ಅನಾವರಣಗೊಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು, ದೈನಂದಿನ ವ್ಯವಹಾರಗಳಲ್ಲಿ ಕನ್ನಡ ಭಾμÉಯನ್ನೇ ಬಳಸುವ ಕುರಿತು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಆಡಳಿತ, ಪತ್ರವ್ಯವಹಾರ ಸೇರಿದಂತೆ ಪ್ರತಿ ಸಂದರ್ಭದಲ್ಲೂ ಕನ್ನಡವನ್ನೇ ಬಳಸುವುದರ ಜತೆಗೆ ಕನ್ನಡ ನಾಡಿನಲ್ಲಿ ವಾಸಿಸುವ ಕನ್ನಡೇತರ ಭಾಷಿಕರಿಗೆ ಪ್ರೀತಿಯಿಂದ ಕನ್ನಡವನ್ನು ಕಲಿಸುವುದಾಗಿ ಎಲ್ಲರೂ ಪ್ರತಿಜ್ಞೆಯನ್ನು ಸ್ವೀಕರಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದರಾದ ನಳೀನ್ ಕುಮಾರ್ ಕಟೀಲು ಅವರು, ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ರಾಜ್ಯ ಸರಕಾರದಿಂದ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಇಂದು ರಾಜ್ಯದ ಉದ್ದಗಲಕ್ಕೂ ಲಕ್ಷಾಂತರ ಜನರು ಕನ್ನಡ ಭಾಷೆಯ ಮಹತ್ವ ಸಾರುವ ಗೀತೆಗಳನ್ನು ಹಾಡುವ ನೂತನ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕøತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರ ಪರಿಕಲ್ಪನೆಯಲ್ಲಿ ಹಾಡಿಸಲಾಗುತ್ತಿದೆ. ಈ ಮೂಲಕ ಮಕ್ಕಳಲ್ಲಿ ಕನ್ನಡದ ಬಗ್ಗೆ ಅಭಿಮಾನವನ್ನು ಜಾಗೃತಿಗೊಳಿಸಲಾಗುತ್ತಿದೆ. ಎಕ್ಕಡ – ಎನ್ನಡಗಳ ಮಧ್ಯೆ ಕನ್ನಡವನ್ನು ಉಳಿಸಬೇಕಿದೆ, ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಉತ್ತಮವಾಗಿ ರೂಪಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಮಾತನಾಡಿ, ಸರಕಾರದ ನಿರ್ದೇಶನದಂತೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರ ಸೂಚನೆಯಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸುಡುಬಿಸಿಲಿನಲ್ಲಿ ನಿಂತು ಮಕ್ಕಳು ಹೆಮ್ಮೆಯಿಂದ ತಾಯ್ನುಡಿಯ ಮಹತ್ವ ಸಾರುವ ಹಾಡುಗಳನ್ನು ಹಾಡಿದ್ದಾರೆ, ನಮ್ಮ ನುಡಿ, ಸಂಸ್ಕøತಿಗಳ ಬಗ್ಗೆ ಮುಂದಿನ ಪೀಳಿಗೆಯವರಿಗೂ ಕೂಡ ಹೆಮ್ಮೆ ಮೂಡಲಿದೆ ಎಂದರು.

ಜಿಲ್ಲೆಯ ರೈಲು, ಬಸ್, ಆಟೋ ನಿಲ್ದಾಣಗಳು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಎನ್‍ಎಂಪಿಟಿ ಸೇರಿದಂತೆ ಸರಕಾರಿ ಕಚೇರಿಗಳು, ಮಾಲ್‍ಗಳು, ಕೈಗಾರಿಕೆಗಳು, ಕಂಪನಿಗಳಲ್ಲಿ ಇಂದು ಈ ಗೀತ ಗಾಯವನ್ನು ಪ್ರಸ್ತುತ ಪಡಿಸಲಾಗಿದೆ, ಅದೇ ರೀತಿ ಜಿಲ್ಲೆಯ ಕಡಲ ತಡಿಗಳಲ್ಲಿ ಮೀನುಗಾರರು ಕನ್ನಡ ಗೀತಗಾಯನವನ್ನು ಪ್ರಸ್ತುತಪಡಿಸಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರÀ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲೆಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ಡಾ. ದಿನಕರ ಪಚ್ಚನಾಡಿ, ಡಾ. ಮೀನಾಕ್ಷಿ ರಾಮಚಂದ್ರ, ರತ್ನಾವತಿ ಬೈಕಾಡಿ, ನಾಗರಾಜ ಶೆಟ್ಟಿ, ಪುರುಷೋತ್ತಮ ಭಂಡಾರಿ, ವಿವಿಧ ಶಾಲೆ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರು, ಉಪನ್ಯಾಸಕರು ಭಾಗವಹಿಸಿದ್ದರು. ಶಿಕ್ಷಕಿಡಾ. ಮಂಜುಳಾ ಶೆಟ್ಟಿ ನಿರೂಪಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English