ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ತೀವ್ರ ಎದೆ ನೋವು, ಆಸ್ಪತ್ರೆಗೆ ದಾಖಲು

1:51 PM, Friday, October 29th, 2021
Share
1 Star2 Stars3 Stars4 Stars5 Stars
(No Ratings Yet)
Loading...

Puneethrajkumarಬೆಂಗಳೂರು: ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ.

ಅವರನ್ನು ವಿಕ್ರಂ ಆಸ್ಪತ್ರೆಯ  ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಅವರಿಗೆ ಹೃದಯಾಘಾತ ಆಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಶಿವರಾಜ್ ಕುಮಾರ್ ಪುತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ನಾಲ್ಕು ಗಂಟೆಗಳ ಹಿಂದಷ್ಟೇ ಶಿವಣ್ಣ ಅಭಿಯನದ ಭಜರಂಗಿ-2 ಚಿತ್ರದ ಯಶಸ್ಸು ಕೋರಿ ಇಡೀ ಚಿತ್ರತಂಡಕ್ಕೆ ಪುನೀತ್ ರಾಜ್ ಕುಮಾರ್ ಶುಭ ಕೋರಿದರು. ನಂತರ ಅವರ ಆರೋಗ್ಯ ಸಮಸ್ಯೆ ಬಿಗಡಾಯಿಸಿದೆ.

Punneth-Rajkuamrವಿಕ್ರಂ ಆಸ್ಪತ್ರೆಗೆ ಅಭಿಮಾನಿಗಳು ಆಗಮಿಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನಿವಾಸದ ಬಳಿಯೂ ಭಾರೀ ಭದ್ರತೆ ಒದಗಿಸಲಾಗಿದೆ.

ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬಂದಿದ್ದು,  ಈ ಬಗ್ಗೆ ತಿಳಿಸಿರುವ ವೈದ್ಯರು ಸದ್ಯಕ್ಕೆ ಏನೂ ಹೇಳುವ ಹಾಗಿಲ್ಲ ಎಂದು  ಹೇಳಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English