ಕೆಎಂಸಿ: ಶಾರ್ಟ್ ಸರ್ಕ್ಯೂಟ್ ತಪ್ಪಿದ ಭಾರೀ ಅನಾಹುತ

4:39 PM, Saturday, January 5th, 2013
Share
1 Star2 Stars3 Stars4 Stars5 Stars
(No Ratings Yet)
Loading...

KMC hospital Fireಮಂಗಳೂರು : ನಗರದ ಕೆಎಂಸಿ ಆಸ್ಪತ್ರೆಯ ಪ್ರಥಮ ಮಹಡಿಯಲ್ಲಿರುವ ಮೈಕ್ರೋಬಯಾಲಜಿ ಪ್ರಯೋಗ ಶಾಲೆಯಲ್ಲಿನ ಎ.ಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಪರಿಣಾಮ ಉಂಟಾದ ಬೆಂಕಿ ಕೆಲ ಕ್ಷಣಗಳಲ್ಲೇ ಕೋಣೆಯ ತುಂಬಾ ಹರಡಿ ಭಾರಿ ಅನಾಹುತ ಸಭಾವಿಸುತ್ತಿತ್ತು ಆದರೆ ಆಸ್ಪತ್ರೆಯ ಸಿಬ್ಬಂದಿ ವರ್ಗ ಮತ್ತು ಅಗ್ನಿ ಶ್ಯಾಮಕ ಸಿಬ್ಬಂದಿಗಳ ತ್ವರಿತ ಕಾರ್ಯಾಚರಣೆಯಿಂದಾಗಿ ಆಗಬಹುದಾದ ಭಾರಿ ಅನಾಹುತವೊಂದು ತಪ್ಪಿದೆ.

ಶನಿವಾರ ಮುಂಜಾನೆ ಸುಮಾರು 2.30 ರ ವೇಳೆಗೆ ಎ ಸಿ ಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣದಲ್ಲಿ ಪಕ್ಕದಲ್ಲಿದ್ದ ಕೋಣೆಗೂ ಹರಡಿದೆ. ಆ ಸಂದರ್ಭ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳು ಜಾಗೃತಗೊಂಡು ಅಗ್ನಿಶಾಮಕ ಇಲಾಖೆಗೆ ಸುದ್ದಿ ಮುಟ್ಟಿಸಿದ್ದು ಮಾತ್ರವಲ್ಲದೆ ಆಸ್ಪತ್ರೆಯಲ್ಲಿದ್ದ ಅಗ್ನಿ ನಂದಕಗಳ ಮೂಲಕ ಬೆಂಕಿಯನ್ನು ನಂದಿಸಲು ಪ್ರಯತ್ನಪಟ್ಟಿದ್ದಾರೆ ಮತ್ತು ತತ್ ಸಮಯದಲ್ಲಿ ಆಗಮಿಸಿದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತಂದು ಸಂಪೂರ್ಣ ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯಿಂದಾಗಿ ಸುಮಾರು ಒಂದು ಕೋಟಿ ನಷ್ಟವಾಗಿರಬಹುದು ಎಂದು ಹೇಳಲಾಗಿದೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English