ನಂದಿನಿ ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಆಗಿ ಉಚಿತ ಸೇವೆ ನೀಡಿದ್ದ ಪುನೀತ್ ರಾಜ್ ಕುಮಾರ್

11:49 PM, Friday, October 29th, 2021
Share
1 Star2 Stars3 Stars4 Stars5 Stars
(No Ratings Yet)
Loading...

Nandini Puneethಮಂಗಳೂರು : ಕರ್ನಾಟಕದ ರಾಜ್ಯದ ಜನಪ್ರಿಯ ಚಲನಚಿತ್ರ ನಟರಾದ ಪುನೀತ್ ರಾಜ್ ಕುಮಾರ್ ರವರ ಅಕಾಲಿಕವಾಗಿ ವಿಧಿವಶವಾಗಿರುವುದು ಹೈನುಗಾರರಿಗೆ ಅಪಾರವಾದ ದು:ಖವನ್ನು ತಂದಿದೆ. ಕರ್ನಾಟಕ ರಾಜ್ಯದ ನಾಡು ನುಡಿ, ಸಂಸ್ಕ್ರತಿಯ ಅಭಿವೃದ್ಧಿಗೆ ಸದಾ ಹೋರಾಟ ಮಾಡುತ್ತಿದ್ದು ವಿಶೇಷವಾಗಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಅಭಿವೃದ್ಧಿಗೆ ಅನುಕೂಲವಾಗುವಂತೆ ನಂದಿನಿ ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಆಗಿ ಉಚಿತ ಸೇವೆ ನೀಡುವ ಮೂಲಕ ಹೈನುಗಾರರಿಗೆ ಸೇವೆ ನೀಡಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇವೆ. ಮೃತರ ಕುಟುಂಬಕ್ಕೆ ದು:ಖವನ್ನು ಭರಿಸುವ ಶಕ್ತಿಯನ್ನು ಪರಮಾತ್ಮನು ನೀಡಲೆಂದು ಪ್ರಾರ್ಥಿಸಿ, ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇವೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷರಾದ ಶ್ರೀ ರವಿರಾಜ ಹೆಗ್ಡೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English