ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಗುದದ್ವಾರದೊಳಗೆ ಇಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಈತನನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಈತ ದೇಹದೊಳಗೆ ಮರೆಮಾಚಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ತಪಾಸಣೆ ವೇಳೆ ಈತನ ಬಳಿ 663 ಗ್ರಾಂ ತೂಕದ 32,55,330 ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನ ಇರುವುದು ಪತ್ತೆಯಾಗಿದೆ. ತಕ್ಷಣ ಚಿನ್ನ ಮತ್ತು ಆರೋಪಿಯನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಮುಂದಿನ ಕ್ರಮ ಕೈಗೊಂಡಿದ್ದಾರೆ.
Click this button or press Ctrl+G to toggle between Kannada and English