ಕಟ್ಟಾ ಸುಬ್ರಹ್ಮಣ್ಯ ನಾಯ್ಡು ರಾಜಿನಾಮೆ ನೀಡಲು ಜಿಲ್ಲಾ ಕಾಂಗ್ರೆಸ್ ಆಗ್ರಹ

4:20 PM, Tuesday, October 5th, 2010
Share
1 Star2 Stars3 Stars4 Stars5 Stars
(No Ratings Yet)
Loading...

ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಐ.ಎ.ಡಿ.ಬಿ ಹಗರಣದಲ್ಲಿ ಭಾಗಿಯಾಗಿರುವ ವಸತಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಟು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಛೇರಿಯೆದುರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ
ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಹಗರಣಗಳ ಸರಮಾಲೆಯೇ ನಡೆದಿದೆ, ಮುಖ್ಯಮಂತ್ರಿಗಳು ಅದಕ್ಕೆ ರಕ್ಷಣೆ ನೀಡುತ್ತಿದ್ದಾರೆ. ಕಟ್ಟಾ ಸುಬ್ರಹ್ಮಣ್ಯ ಹಾಗೂ ಅವರ ಮಗ ಕಟ್ಟಾ ಜಗದೀಶ್ ನಾಯ್ಡು ಅಧಿಕಾರವನ್ನು ದುರುಪಯೋಗ ಮಾಡಿ ರಾಜ್ಯದ ಸಂಪತ್ತನ್ನು ಲೂಟಿಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸುರೇಶ್ ಬಲ್ಲಾಳ್ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.
ಯಾವುದೇ ಯೋಜನೆಗಳನ್ನು ಜಾರಿಗೊಳಿಸದೆ ಬಡಾಯಿ ಕೊಚ್ಚುವುದು ಸರಕಾರದ ದ್ಯೇಯ ಮಂತ್ರವಾಗಿದೆ ಸರಕಾರದ ಆಸ್ತಿಗಳನ್ನು ಡಿನೋಟಿಫಿಕೇಶನ್ ಮಾಡಿ ಅದನ್ನು ಸಚಿವರ ಶಾಸಕರ ಸಂಬಂಧಿಕರ ಹೆಸರಲ್ಲಿ ಮಾಡಿಕೊಳ್ಳುವುದೇ ಸರಕಾರದ ಸಾಧನೆಯಾಗಿದೆ ಎಂದು ಬಲ್ಲಾಳ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ
ರಾಮ ರಾಮ ಎಂದು ಜನರನ್ನು ಮೋಸಮಾಡಿ ಅಧಿಕಾರ ಹಿಡಿದಿರುವ ಬಿಜೆಪಿ ಪಕ್ಷದಲ್ಲಿ ರಾಕ್ಷಸರೇ ತುಂಬಿಹೋಗಿದ್ದಾರೆ. ರಾಮನ ಆದರ್ಶವನ್ನು ಪಾಲಿಸುವ ಒಬ್ಬನೇ ಒಬ್ಬ ಸಚಿವ ಬಿಜೆಪಿಯಲಿಲ್ಲ. ಬಿಜೆಪಿಯವರು ಅನಾಚಾರಗಳನ್ನು ಮಾಡಿ ಅದನ್ನು ಕಾಂಗ್ರೆಸ್ ನ ಮೇಲೆ ಹಾಕುತ್ತಿದ್ದಾರೆ ಎಂದು ಎಂ.ಜೆ ಹೆಗಡೆ ಹೇಳಿದರು.
ಪ್ರತಿಭಟನೆಯ ಅಧ್ಯಕ್ಷತೆಯನ್ನು ಕೋಡಿಜಾಲ್ ಇಬ್ರಾಹಿಂ ವಹಿಸಿದ್ದರು, ಐವನ್ ಡಿ ಸೋಜಾ ಕಾಂಗ್ರೆಸ್ ಕಾರ್ಯಕರ್ತರನ್ನು ಸ್ವಾಗತಿಸಿದರು. ಸದಾನಂದ ಪೂಂಜ, ಪದ್ಮನಾಭ ನರಿಂಗಾನ, ಶಶಿಧರ ಹೆಗ್ಡೆ, ಮಮತಾ ಗಟ್ಟಿ, ಸಾಹುಲ್ ಹಮೀದ್ ಬೆಳ್ತಂಗಡಿ, ಸುಧೀರ್ ಟಿಕೆ, ಡಿ ಅಶೋಕ್, ಎಂ ಅಶ್ರಫ್ ಮೊದಲಾದ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನೆಯ ಕೊನೆಯಲ್ಲಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ರವರ ಪ್ರತಿಕೃತಿಯನ್ನು ಕಾಂಗ್ರೆಸ್ ಕಾರ್ಯಕರ್ತರು ದಹಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English