ಮಂಗಳೂರು : 7 ಮಂದಿ ಸರಗಳ್ಳರ ಬಂಧನ

4:30 PM, Tuesday, November 2nd, 2021
Share
1 Star2 Stars3 Stars4 Stars5 Stars
(No Ratings Yet)
Loading...

chain Snatchersಮಂಗಳೂರು :  ಸರಗಳ್ಳತನ, ಸುಲಿಗೆ, ದ್ವಿಚಕ್ರ ವಾಹನ  ಕಳವು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ 24 ಪ್ರಕರಣಗಳಲ್ಲಿ 7 ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಾವೂರು ನಿವಾಸಿ ಅಬ್ದುಲ್ ಇಶಾಮ್ ಯಾನೆ ಇಶಾಮ್ (26), ಪಂಜಿಮೊಗರು ನಿವಾಸಿ ಸಫ್ವಾನ್ ಯಾನೆ ಸಪ್ಪು (29), ಕಾವೂರು ನಿವಾಸಿ ಮುಹಮ್ಮದ್ ತೌಸೀಫ್ ಯಾನೆ ಹಾರಿಸ್ ಯಾನೆ ಆಚಿ, ಶಾಂತಿನಗರ ನಿವಾಸಿ ಅಬ್ದುಲ್ ಖಾದರ್ ಸಿನಾನ್ (30), ಮಲ್ಲೂರು ಮುಹಮ್ಮದ್ ಪಜಲ್ ಯಾನೆ ಪಜ್ಜು (32), ಚೊಕ್ಕಬೆಟ್ಟು ನಿವಾಸಿ ಅರ್ಷಾದ್ (34), ಕುಂದಾಪುರ ನಿವಾಸಿ ಮುಜಾಹಿದುರ್ ರೆಹಮಾನ್ (23) ಎಂದು ಗುರುತಿಸಲಾಗಿದೆ.

ಮಂಗಳೂರು ಪೊಲೀಸ್ ಕಮಿಷನರೆಟ್‌ನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ  ಮಹಿಳೆಯರು ಒಬ್ಬಂಟಿಯಾಗಿ ನಿರ್ಜನ ಪ್ರದೇಶಗಳಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸರ ಸೇರಿದಂತೆ ಆಭರಣಗಳನ್ನು ಎಳೆದೊಯ್ಯುತ್ತಿದ್ದ ಪ್ರಕರಣಗಳು ಈ ನಾಲ್ಕು ತಿಂಗಳ ಅವಧಿಯಲ್ಲಿ ಸಾರ್ವಜನಿಕರಲ್ಲಿ ಭಯ, ಆತಂಕಕ್ಕೆ ಕಾರಣವಾಗಿತ್ತು. ಹಿರಿಯ ಅಧಿಕಾರಿಗಳು ಸೇರಿದಂತೆ 60ಕ್ಕೂ ಅಧಿಕ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಅಪರಾಧ ಪ್ರಕರಣಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಏಳು ಮಂದಿಯನ್ನು ಬಂಧಿಸಿದ್ದು, ಇಬ್ಬರು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮಾಹಿತಿಯನ್ನು ಪಡೆದಿದ್ದಾರೆ.

ಬಂಧಿತರಿಂದ 10 ಲಕ್ಷ ರೂ. ಮೌಲ್ಯದ 210 ಗ್ರಂ ಚಿನ್ನದ ಸರ, ಕರಿಮಣಿ ಸರ ಹಾಗೂ 2 ಲಕ್ಷ ರೂ. ಮೌಲ್ಯದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English