ಬಂಟ್ವಾಳ: ಚಪ್ಪಲಿ ಹಾಕಿಕೊಂಡು ಕಾರಿಂಜ ಮಹತೊಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಅಕ್ರಮ ಪ್ರವೇಶ ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತ್ರತ್ವದ ಪೋಲೀಸ್ ತಂಡ ಬಂಧಿಸಿದ್ದಾರೆ.
ಕಾಸರಗೋಡು ಹಾಗೂ ಉಳ್ಳಾಲ ಮೂಲದ ನಾಲ್ವರು ಆರೋಪಿ ಗಳನ್ನು ವಶಕ್ಕೆ ಪಡೆದುಕೊಂಡು ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಕಿಡಿಗೇಡಿಗಳು ಅಕ್ರಮವಾಗಿ ದೇವಳದ ಒಳಗೆ ಚಪ್ಪಲಿ ಹಾಕಿ ಪ್ರವೇಶ ಮಾಡಿ ಹಿಂಧೂಗಳ ಭಾವನೆಗಳಿಗೆ ದಕ್ಕೆ ತಂದಿದ್ದು. ಅಲ್ಲದೆ ಅದನ್ನು ದೇವಸ್ಥಾನದಲ್ಲಿ ಚಪ್ಪಲಿ ಹಾಕಿ ನಡೆದಾಡುವ ವಿಡಿಯೋ ವನ್ನು ಸಾಮಾಜಿಕ ಜಾಲತಾಣ ದಲ್ಲಿ ಹಾಕಿ ವಿಜ್ರಂಭಿಸಿ ಹಿಂದುಗಳ ಧಾರ್ಮಿಕ ನಂಬಿಕೆಗೂ ಧಕೆ ತಂದಿದ್ದು ಇದನ್ನು ದೇವಸ್ಥಾನದ ಆಡಳಿತ ಮಂಡಳಿ ತೀವ್ರವಾಗಿ ಖಂಡಿಸಿದ್ದು ಆರೊಪಿಗಳನ್ನು ಶೀಘ್ರ ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿ ಪುಂಜಾಲಕಟ್ಟೆ ಠಾಣೆಗೆ ಮನವಿ ನೀಡಿತ್ತು.
ಘಟನೆ ಗೆ ಸಂಬಂಧಿಸಿದಂತೆ ಕಾರ್ಯಚರಣೆ ನಡೆಸಿದ ಪುಂಜಾಲಕಟ್ಟೆ ಪೋಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು. ಇನ್ನುಳಿದ ಇಬ್ಬರು ಆರೋಪಿಗಗಳಿಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.
Click this button or press Ctrl+G to toggle between Kannada and English