- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಅಡಿಕೆ ಕದ್ದಿದ್ದಾನೆ ಎಂದು ಆರೋಪಿಸಿ ಬಾಲಕನಿಗೆ ಹಲ್ಲೆ, ಮಕ್ಕಳ ಕಲ್ಯಾಣ ಇಲಾಖೆಗೆ ದೂರು

Arecanut Thief [1]ಸುಳ್ಯ :  ಅಡಿಕೆ ಕದ್ದಿದ್ದಾನೆ ಎಂದು ಆರೋಪಿಸಿ ಬಾಲಕನಿಗೆ ಹಲ್ಲೆ ನಡೆಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ  ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದು ಹಲ್ಲೆ ನಡೆಸಿದ 10 ಮಂದಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು ಮಾತ್ರವಲ್ಲದೆ ಹಲ್ಲೆ ನಡೆಸಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿತ್ತು. ಇದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಗುತ್ತಿಗಾರು ಪರಿಸರದ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್, ಚಂದ್ರ, ಚೇತನ್ ಎಂಬವರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿರುವುದಾಗಿ ತಿಳಿದುಬಂದಿದೆ. ವೀಡಿಯೊ ವೈರಲ್ ಆಗಿ ಪ್ರಕರಣ ದಾಖಲಾಗುತ್ತಿದ್ದಂತೇ ಹಲ್ಲೆ ನಡೆಸಿದವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.