- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕ್ಯಾಶ್ಯೂ ಫ್ಯಾಕ್ಟರಿ ಗೋಡೆ ಕುಸಿದು, ವ್ಯಕ್ತಿ ಸಾವು

wall Colapse [1]ಸುಳ್ಯ: ಕ್ಯಾಶ್ಯೂ ಫ್ಯಾಕ್ಟರಿಯೊಂದರ ಗೋಡೆ ಮಗುಚಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಸುಳ್ಯದ ಗಾಂಧಿನಗರ ಎಂಬಲ್ಲಿ ನಡೆದಿದೆ.

ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ ಗೋಡೆ ಕುಸಿದು ಬಿದ್ದ ಪರಿಣಾಮ, ಅಬ್ದುಲ್ ಖಾದರ್ ಎಂಬ ವ್ಯಾಪಾರಿ ಮೃತಪಟ್ಟಿದ್ದಾರೆ. ಇವರು ಕಳೆದ ಹಲವು ವರ್ಷಗಳಿಂದ ಸುಳ್ಯದ ಎಪಿಎಂಸಿ ಬಳಿ ಗುಜರಿ ವಸ್ತುಗಳ ವ್ಯಾಪಾರ ಹಾಗೂ ಹಳೆ ಕಟ್ಟಡಗಳ ಕಬ್ಬಿಣ ಸಾಮಗ್ರಿಗಳನ್ನು ಖರೀದಿಸಿ ಮಾರಾಟ ಮಾಡುತ್ತಿದ್ದರು.

ಕಳೆದ ವರ್ಷ ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ವ್ಯವಹಾರ ಸ್ಥಗಿತಗೊಂಡಿತ್ತು. ಹೀಗಾಗಿ, ಇಲ್ಲಿನ ಕಬ್ಬಿಣ ಸಾಮಗ್ರಿಗಳನ್ನು ಸಂಗ್ರಹಿಸುತ್ತಿದ್ದರು. ಇಂದು ಬೆಳಗ್ಗೆ ತಮ್ಮ ಕೆಲಸದಾಳುಗಳ ಜೊತೆ ಕಬ್ಬಿಣದ ವಸ್ತುಗಳನ್ನು ಹಗ್ಗ ಹಾಕಿ ಎಳೆಯುತ್ತಿರುವಾಗ ಗೋಡೆ ಮೈಮೇಲೆ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕಳುಹಿಸಲಾಗಿದೆ.

ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹದ ಮಹಜರು ನಡೆಸಿದ್ದಾರೆ.