ಕೆಲಸಕ್ಕೆ ಹೋದ ಯುವತಿ ಮನೆಗೆ ಬಾರದೇ ನಾಪತ್ತೆ

10:01 PM, Tuesday, November 9th, 2021
Share
1 Star2 Stars3 Stars4 Stars5 Stars
(No Ratings Yet)
Loading...

Tara ಭಟ್ಕಳ: ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿ ನಾಲ್ಕು ದಿನ ಕಳೆದರೂ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ.

ನಾಪತ್ತೆಯಾದ ಯುವತಿಯನ್ನು ತಾರಾ ನಾರಾಯಣ ಮರಾಠಿ ಎಂದು ಗುರುತಿಸಲಾಗಿದೆ. ಈಕೆ ನವೆಂಬರ್ 5 ರಂದು ಮಧ್ಯಾಹ್ನ 12-00 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವಳು, ಅಲ್ಲಿಗೂ ಹೋಗದೇ ಈವರೆಗೂ ಮನೆಗೆ ವಾಪಸ್ ಬಾರದೇ, ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿದ್ದಾಳೆ .

ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English