ಮಹಿಳೆಯೊಬ್ಬಳನ್ನು ಬೆತ್ತಲೆಯಾಗಿಸಿ ಪೂಜೆ ಮಾಡುತ್ತಿದ್ದ ಮಾಂತ್ರಿಕ ಸಹಿತ ಆರು ಮಂದಿ ಬಂಧನ

4:51 PM, Thursday, November 11th, 2021
Share
1 Star2 Stars3 Stars4 Stars5 Stars
(No Ratings Yet)
Loading...

Nidhiರಾಮನಗರ :  ಮಹಿಳೆಯೊಬ್ಬಳನ್ನು ಬೆತ್ತಲೆಯಾಗಿಸಿ ಪೂಜೆ ಮಾಡುತ್ತಿದ್ದ ತಮಿಳುನಾಡಿನ ಆರು ಆರೋಪಿಗಳನ್ನು ಸಾತನೂರು ಪೊಲೀಸರು ಪೊಲೀಸರು ಬಂಧಿಸಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಭೂಹಳ್ಳಿ ಗ್ರಾಮದಲ್ಲಿ ಈ ಆರೋಪಿಗಳನ್ನು ಬಂಧಿಸಲಾಗಿದೆ.

ನಿಮ್ಮ ಮನೆಯಲ್ಲಿ ನಿಧಿ ಇದೆ ಎಂದು ಭೂಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬುವರನ್ನು ನಂಬಿಸಿ ವಾಮಾಚಾರ ಮಾಡುತ್ತಿದ್ದ ತಮಿಳುನಾಡು ಮೂಲದ ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಳವಾರ ತಡರಾತ್ರಿ ಶ್ರೀನಿವಾಸ್‌ರವರ ನೂರು ವರ್ಷಗಳಷ್ಟು ಹಳೆಯ ಮನೆಯಲ್ಲಿ ಮಹಿಳೆ ಒಬ್ಬಳನ್ನು ಬೆತ್ತಲೆಯಾಗಿಸಿ ವಾಮಾಚಾರದಲ್ಲಿ ತೊಡಗಿದ್ದಾಗ ದಾಳಿ ಮಾಡಿದ ಸಾತನೂತು ಪೊಲೀಸರು, ತಮಿಳುನಾಡು ಮೂಲದ ಪ್ರಮುಖ ಆರೋಪಿ ಪಾರ್ಥಸಾರಥಿ, ಮೇಸ್ತ್ರಿ ನಾಗರಾಜು, ಗುರೂಜಿ ಶಶಿಕುಮಾರ್, ಆತನ ಶಿಷ್ಯ ಮೋಹನ್ ಲಕ್ಷ್ಮಿನರಸಪ್ಪ ಹಾಗೂ ಲೋಕೇಶ್ ಎಂಬುವರನ್ನು ಬಂಧಿಸಿದ್ದಾರೆ.

ಶ್ರೀನಿವಾಸ್ ನ ಪತ್ನಿ ಬೆತ್ತಲಾಗಲು ಒಪ್ಪದ ಹಿನ್ನೆಲೆಯಲ್ಲಿ ಮಾಂತ್ರಿಕನ ಸಲಹೆಯಂತೆ ಮಂಗಳವಾರ ರಾತ್ರಿ ಶ್ರೀನಿವಾಸ್ ಮನೆಯಲ್ಲಿ ಬೆಂಗಳೂರಿನ ಕೆಂಗೇರಿ ಮೂಲದ ಕೂಲಿ ಕೆಲಸ ಮಾಡುವ ಮಹಿಳೆಯನ್ನು 50 ಸಾವಿರ ನೀಡುವ ಆಸೆ ತೋರಿಸಿ ಕರೆತಂದ ಬೆತ್ತಲುಗೊಳಿಸಿ ಪೂಜೆ ಮಾಡಿದ್ದಾರೆ. ಆ ಮಹಿಳೆ ತನ್ನ ಆರು ವರ್ಷದ ಮಗುವನ್ನೂ ಜತೆಗೆ ಕರೆದುಕೊಂಡು ಬಂದಿದ್ದಳು.

         

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English